ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ: ಪ್ರಧಾನಿಗೆ ಭದ್ರತೆ ಕಲ್ಪಿಸುವಲ್ಲಿ ಲೋಪ ಖಂಡಿಸಿ ಪಂಜಿನ ಮೆರವಣಿಗೆ

Last Updated 6 ಜನವರಿ 2022, 14:57 IST
ಅಕ್ಷರ ಗಾತ್ರ

ವಿಜಯಪುರ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡದಪಂಜಾಬ್‌ ಸರ್ಕಾರದ ಕ್ರಮವನ್ನು ಖಂಡಿಸಿ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಘಟಕದಿಂದ ಶಿವಾಜಿ ವೃತ್ತದಲ್ಲಿ ಪಂಜಿನ ಮೆರವಣಿಗೆ ನಡೆಸಲಾಯಿತು.

ಬಿಜೆಪಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಬಸವರಾಜ ಹೂಗಾರ ಮಾತನಾಡಿ, ಕಾಂಗ್ರೆಸ್ ಸರ್ಕಾರದವ್ಯವಸ್ಥಿತ ಸಂಚಾಗಿದೆ. ನೈತಿಕತೆಯಿಲ್ಲದೆ ರಾಜಕಾರಣ ಮಾಡುತ್ತಿರುವ ಕಾಂಗ್ರೆಸ್ ಪಕ್ಷ ಬರುವ ದಿನಗಳಲ್ಲಿ ದೇಶದಲ್ಲಿ ನಾಮಾವಶೇಷವಾಗಲಿದೆ ಎಂದರು.

ವಿಭಾಗ ಸಂಘಟನಾ ಮಹಾಮಂತ್ರಿ ಪ್ರಕಾಶ ಅಕ್ಕಲಕೋಟ ಮಾತನಾಡಿ,ಸಂಖ್ಯಾಬಲ ಕಳೆದುಕೊಂಡ ಕಾಂಗ್ರೆಸ್ ದಿಕ್ಕಿಲ್ಲದಂತಾಗಿ ಇಂತಹ ಕೃತ್ಯ ಮಾಡುತ್ತಿದೆ ಇದು ಪ್ರಜಾಪ್ರಭುತ್ವದಲ್ಲಿ ಅತ್ಯಂತ ಕೀಳುಮಟ್ಟದ ಕೃತ್ಯವಾಗಿದೆ. ಇಂತಹ ಕೃತ್ಯ ಮಾಡುತ್ತಿರುವ ಕಾಂಗ್ರೆಸ್ ರಾಜಕಾರಣ ಮಾಡಲು ನೈತಿಕತೆ ಕಳೆದುಕೊಂಡಿದೆ ಎಂದು ಹೇಳಿದರು.

ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಯವರು ಕೇವಲ ಪಾಕಿಸ್ತಾನದಿಂದ 10 ಕಿಲೋ ಮೀಟರ್ ಅಂತರದಲ್ಲಿರುವ ಗಡಿಯಲ್ಲಿ ಇಂಥ ಕೃತ್ಯದಲ್ಲಿ ಸಿಲುಕಿರುವುದು ವಿಷಾದನೀಯ ಘಟನೆ. ಕೂಡಲೇ ಪಂಜಾಬ್ ಕಾಂಗ್ರೆಸ್ ಸರ್ಕಾರವನ್ನು ವಜಾಗೊಳಿಸಿ, ರಾಷ್ಟ್ರಪತಿ ಆಡಳಿತ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಜೋಗುರ, ಶಿವರುದ್ರ ಬಾಗಲಕೋಟ, ಬಸವರಾಜ ಬಿರಾದಾರ, ನಗರ ಮಂಡಲ ಅಧ್ಯಕ್ಷ ಮಳುಗೌಡ ಪಾಟೀಲ, ರಾಜೇಶ ತಾವಸೆ, ಮಂಡಲ ಯುವ ಮೋರ್ಚಾ ಅಧ್ಯಕ್ಷ ರವಿ ಬಿರಾದಾರ, ಸತೀಶ ಪಾಟೀಲ,ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ ಶಿಂಧೆ, ರಾಜು ಮಗಿಮಠ, ವಿನಯ ಭುವನೇಶ್ವರ, ನಿಕಿಲ್ ಚೌದರಿ, ಪ್ರಶಾಂತ ಪೂಜಾರಿ, ವಿನಾಯಕ ದಹಿಂಡೆ, ಸಂದೀಪ ಪಾಟೀಲ, ಆನಂದ ಮುಚ್ಚಂಡಿ, ವಿಠ್ಠಲ ನಡುವಿನಕೇರಿ, ಸುರೇಶ ಬಿರಾದಾರ, ಮಹಿಳಾ ಮೋರ್ಚಾ ಅಧ್ಯಕ್ಷೆ ಛಾಯಾ ಮಶಿಯಣ್ಣವರ, ಭಾರತಿ ಭುಯ್ಯಾರ, ರಜನಿ ಸಂಬಣ್ಣಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT