ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಟ್ಟಣ ಪಂಚಾಯ್ತಿಯಾದ ಬಬಲೇಶ್ವರ: ಎಂ.ಬಿ.ಪಾಟೀಲ

ರಾಜ್ಯ ಸಚಿವ ಸಂಪುಟದಲ್ಲಿ ಒಪ್ಪಿಗೆ
Last Updated 1 ಅಕ್ಟೋಬರ್ 2020, 15:44 IST
ಅಕ್ಷರ ಗಾತ್ರ

ವಿಜಯಪುರ: ಬಬಲೇಶ್ವರ ಗ್ರಾಮ ಪಂಚಾಯ್ತಿಯನ್ನು ಪಟ್ಟಣ ಪಂಚಾಯ್ತಿನ್ನಾಗಿ ಮೇಲ್ದರ್ಜೆಗೆ ಏರಿಸಲು ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ಶಾಸಕ ಎಂ.ಬಿ.ಪಾಟೀಲ ತಿಳಿಸಿದ್ದಾರೆ.

ಬಬಲೇಶ್ವರ, ತಿಕೋಟಾ ಗ್ರಾಮ ಪಂಚಾಯ್ತಿಗಳನ್ನು ಪಟ್ಟಣ ಪಂಚಾಯ್ತಿಯಾಗಿ ಮೇಲ್ದರ್ಜೆಗೆ ಏರಿಸುವ ಉದ್ದೇಶದಿಂದ 2018ರಲ್ಲಿ ಬೆಂಗಳೂರಿನ ಟೈಡ್ ಟೆಕ್ನೋ ಕ್ರ್ಯಾಕ್ ಕಂಪನಿಯು ಸರ್ವೇ ಮಾಡಿ, ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಈ ಪ್ರಸ್ತಾವನೆಯನ್ನು ಪರಿಗಣಿಸಿ ಪಟ್ಟಣ ಪಂಚಾಯ್ತಿ ಎಂದು ಘೊಷಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ತಾಂತ್ರಿಕ ಕಾರಣಗಳಿಂದ ಬಬಲೇಶ್ವರವನ್ನು ಪಟ್ಟಣ ‍ಪಂಚಾಯ್ತಿಯನ್ನಾಗಿ ಮೇಲ್ದರ್ಜೆಗೆ ಏರಿಸುವ ಕ್ರಮವನ್ನು ತಡೆಹಿಡಿಯಲಾಗಿತ್ತು. ಇದೀಗಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ (ಆರ್.ಡಿ.ಪಿ.ಆರ್) ನಿರಪೇಕ್ಷಣಾ ಪತ್ರ ಸಿಕ್ಕಿರುವುದರಿಂದ ಪಟ್ಟಣ ಪಂಚಾಯ್ತಿಯನ್ನಾಗಿ ಮೇಲ್ದರ್ಜೆಗೆ ಏರಿಸಲಾಗಿದ ಎಂದು ತಿಳಿಸಿದ್ದಾರೆ.

ತಿಕೋಟಾ ಗ್ರಾಮ ಪಂಚಾಯ್ತಿಯನ್ನು ಈಗಾಗಲೇ ಪಟ್ಟಣ ಪಂಚಾಯ್ತಿಯನ್ನಾಗಿ ಮೇಲ್ದರ್ಜೆಗೆ ಏರಿಸಲಾಗಿದೆ ಎಂದರು.

ಬಬಲೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ನೂತನ ಎರಡು ತಾಲ್ಲೂಕುಗಳು ಹಾಗೂ ಎರಡು ನೂತನ ಪಟ್ಟಣ ಪಂಚಾಯ್ತಿಗಳು ಆಗಿರುವುದರಿಂದ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ವೇಗ ದೊರೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT