ಭಾನುವಾರ, ನವೆಂಬರ್ 27, 2022
27 °C
ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಒತ್ತಾಯ

ಪಿಎಸ್‌ಐ ಅಕ್ರಮ ನೇಮಕ ಪ್ರಕರಣ ಸಿಬಿಐಗೆ ವಹಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಒತ್ತಾಯಿಸಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಇಡೀ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಪುತ್ರನ ಕೈವಾಡವಿದೆ. ಇದನ್ನೇ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಇದನ್ನು ಸಿಬಿಐ ತನಿಖೆಗೆ ವಹಿಸಿದರೆ ಯಾರು ಕಳ್ಳರು ಇದ್ದಾರೆ ಎಂಬುದು ಗೊತ್ತಾಗುತ್ತದೆ ಎಂದ ಯತ್ನಾಳ ಹೇಳಿದರು.

ಎಡಿಜಿಪಿ ಒಬ್ಬರನ್ನೇ ಬಂಧಿಸಿ ಎಫ್‌ಐಆರ್ ಮಾಡಿದ್ದೀರಾ? ಕೇವಲ ಎಡಿಜಿಪಿ ಮಾತ್ರ ಇದರಲ್ಲಿ ಶಾಮೀಲಾಗಿಲ್ಲ,
ಇದರ ಹಿಂದೆ ದೊಡ್ಡ ಕಳ್ಳರಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಪಿಎಸ್ಐ ಹುದ್ದೆಗಾಗಿ ₹70 ಲಕ್ಷದಿಂದ ₹80 ಲಕ್ಷ ಹಣ ಕೊಟ್ಟಿದ್ದಾರೆ. ಅವರ ಕುಟುಂಬವೇ ಹಾಳಾಗಿ ಹೋಗುತ್ತವೆ. ಹಣವನ್ನು ವಾಪಸ್ ಕೊಡಿಸಬೇಕು ಎಂದು ಒತ್ತಾಯಿಸಿದರು.

ಇಡೀ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಕೊಡಬೇಕು ಎಂದು ಗೃಹ ಸಚಿವರಿಗೆ ಆಗ್ರಹಿಸಿದ ಯತ್ನಾಳ, ಇಂಥ ಘಟನೆಗಳಿಂದಲೇ ಭ್ರಷ್ಟಾಚಾರ ಬೆಳೆದಿದೆ. ಪೊಲೀಸ್ ಆಧಿಕಾರಿಗಳ ವರ್ಗಾವಣೆಗೂ ಹಣ ತಿಂದರೆ ಪ್ರಾಮಾಣಿಕತೆ ಬೆಳೆಸಲು ಸಾಧ್ಯವಿಲ್ಲ ಎಂದು ಹೇಳಿದರು.

ಚಿತ್ರದುರ್ಗದ ಮುರುಘಾ ಶ್ರೀಗಳ ವಿರುದ್ದ ಪೋಕ್ಸೊ ಪ್ರಕರಣ ದಾಖಲಾಗಿ, ಬಂಧನವಾಗಿರುವುದರಿಂದ ಅವರ ಬದಲಾಗಿ ಬೇರೆ ಸ್ವಾಮೀಜಿ ಆಯ್ಕೆ ಮಾಡಬೇಕು ಎಂದು ಒತ್ತಾಯಿಸಿದರು.

ಸ್ವಾಮೀಜಿಗಳನ್ನು ಪೀಠತ್ಯಾಗ ಮಾಡಲು ನಿರ್ದೇಶಿಸಬೇಕು, ತಾತ್ಕಾಲಿಕ ಮೇಲುಸ್ತುವಾರಿ ಸಮಿತಿ ರಚನೆ ಮಾಡಬೇಕು ಎಂದು ಈಗಾಗಲೇ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಹಾಗೂ ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಅವರಿಗೆ ಪತ್ರ ಬರೆದಿದ್ದೇನೆ ಎಂದರು.

ಘಟನೆಯಿಂದ ವೀರಶೈವ ಲಿಂಗಾಯತ ಸಮುದಾಯಕ್ಕೆ ಬಹಳ ಅಪಮಾನವಾಗಿದೆ. ಸ್ವಯಂ ಪ್ರೇರಣೆಯಿಂದ ಪೀಠ ತ್ಯಾಗ ಮಾಡದಿದ್ದರೆ ಭಕ್ತರೇ ಅವರನ್ನು ಉಚ್ಛಾಟನೆ ಮಾಡಬೇಕಾಗುತ್ತದೆ. ಮಠದಲ್ಲಿ ಅವ್ಯವಹಾರವಾಗಿದ್ದು ಅದರ ಸಮಗ್ರ ತನಿಖೆಯಾಗಬೇಕು ಎಂದು ಒತ್ತಾಯಿಸಿದರು. 

ಸ್ವಾಮೀಜಿ ವಿರುದ್ಧ ಪೋಕ್ರೊ ಕಾಯ್ದೆಯಡಿ ದೂರು ದಾಖಲಾದರೂ ಪೊಲೀಸ್ ಇಲಾಖೆ ಆರು ದಿನ ಕಾಲ ಸ್ವಾಮೀಜಿಯನ್ನು ಯಾಕೆ ಬಂಧಿಸಿಲ್ಲ ಎಂದು ಅವರು ಪ್ರಶ್ನಿಸಿದರು.

****

ಯಡಿಯೂರಪ್ಪ ಮುಖ್ಯಮಂತ್ರಿ ಹುದ್ದೆ ಎರಡು ಬಾರಿ ಕಳೆದುಕೊಳ್ಳಲು ಅವರ ಪುತ್ರ ವಿಜಯೇಂದ್ರ ಮುಖ್ಯ ಕಾರಣ. ಅಪ್ಪನ ಅಧಿಕಾರವನ್ನು ಮಗ ದುರ್ಬಳಕೆ ಮಾಡಿಕೊಂಡು ಭ್ರಷ್ಟಾಚಾರ ಮಾಡಿದ ಪರಿಣಾಮ

–ಬಸನಗೌಡ ಪಾಟೀಲ ಯತ್ನಾಳ, ಶಾಸಕ ವಿಜಯಪುರ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.