ಭಾನುವಾರ, ಆಗಸ್ಟ್ 1, 2021
23 °C

ವಿಜಯಪುರ: ಚಿಕಿತ್ಸೆ ಸಿಗದೆ ಪರದಾಟ, ವ್ಯಕ್ತಿಗೆ ನೆರವಾದ ಜಿಲ್ಲಾಧಿಕಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ಚಿಕಿತ್ಸೆ ಸಿಗದೆ ಪರಾದಡುತ್ತಿದ್ದ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರಿಗೆ ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ ಸ್ಪಂದಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಸಿಂದಗಿ ತಾಲ್ಲೂಕಿನಿಂದ ರೋಗಿಯೊಂದಿಗೆ ಕಾರಿನಲ್ಲಿ ಶುಕ್ರವಾರ ನೇರವಾಗಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಕುಟುಂಬದವರು ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ ಅವರನ್ನು ಭೇಟಿಯಾದರು.

ಜಿಲ್ಲಾಸ್ಪತ್ರೆ, ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ವೈದ್ಯರು ನಿರಾಕರಿಸುತ್ತಿದ್ದಾರೆ. ರಾತ್ರಿಯಿಡೀ ತಿರುಗಾಡಿದೆವು. ಯಾರೊಬ್ಬರೂ ಚಿಕಿತ್ಸೆ ನೀಡಲಿಲ್ಲ ಎಂದು ಕುಟುಂಬದವರು ಅಳಲು ತೋಡಿಕೊಂಡರು.

ಜಿಲ್ಲಾಧಿಕಾರಿ ಅವರು ತಕ್ಷಣ ಜಿಲ್ಲಾಸ್ಪತ್ರೆ ವೈದ್ಯರಿಗೆ ಕರೆ ಮಾಡಿ, ರೋಗಿಯನ್ನು ಚಿಕಿತ್ಸೆಗೆ ದಾಖಲಿಸುವಂತೆ ಸೂಚಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು