ಭಾನುವಾರ, ಜುಲೈ 25, 2021
22 °C

ಟರ್ಬೋ ಏರ್‌ಲೈನ್ಸ್‌ ವಿಮಾನ ಹಾರಾಟ: ಕಾರಜೋಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ನಗರದಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣದಿಂದ ಕಾರ್ಯಾಚರಣೆ ನಡೆಸಲು  ಟರ್ಬೋ ಏರ್‌ಲೈನ್ಸ್‌ ಕಂಪನಿ  ಮುಂದೆ ಬಂದಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ  ತಿಳಿಸಿದ್ದಾರೆ.

ವಿಜಯಪುರದಿಂದ ಬೆಂಗಳೂರಿಗೆ ಪ್ರತಿದಿನ ಎಟಿಆರ್ 72 ವಿಮಾನವನ್ನು ಹಾರಾಟ ನಡೆಸಲು ಕೇಂದ್ರ  ಹಾಗೂ ರಾಜ್ಯ ಸರ್ಕಾರ ಕಂಪನಿಯೊಂದಿಗೆ ಒಪ್ಪಂದ ಮಾಡಿಕೊಳ್ಳಲು ಆಸಕ್ತಿ ಹೊಂದಿವೆ ಎಂದರು.

ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿಯು ತ್ವರಿತಗತಿಯಿಂದ ನಡೆಯುತ್ತಿದ್ದು, ಈ ಕಾಮಗಾರಿಯನ್ನು 2022ರ ಮಾರ್ಚ್‌ಗೆ ಪೂರ್ಣಗೊಳಿಸುವ ಗುರಿಯನ್ನು ಹೊಂದಲಾಗಿದೆ. ಈಗಾಗಲೇ ಕಾಮಗಾರಿಯು ತ್ವರಿತವಾಗಿ  ನಡೆಯುತ್ತಿದೆ ಎಂದು ತಿಳಿಸಿದರು.

ವಿಮಾನ ನಿಲ್ದಾಣದ ಕಾಮಗಾರಿಯ ಗುಣಮಟ್ಟ ಕಾಯ್ದುಕೊಂಡು ಹಾಗೂ ಶೀಘ್ರವಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ವಿಜಯಪುರ, ಬಾಗಲಕೋಟೆ ಅವಳಿ ಜಿಲ್ಲೆಗಳ ಜನತೆಗೆ ವಿಮಾನಯಾನ ಕೈಗೊಳ್ಳಲು ಅನುವಾಗಲಿದೆ ಎಂದು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು