ಭಾನುವಾರ, ಜೂನ್ 13, 2021
22 °C

ವಿಜಯಪುರ: ಜಿಲ್ಲೆಯಲ್ಲಿ ಕಪ್ಪು ಶಿಲೀಂಧ್ರ ಸೋಂಕಿನಿಂದ ಇಬ್ಬರು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ಜಿಲ್ಲೆಯಲ್ಲಿ ಕಪ್ಪು ಶಿಲೀಂಧ್ರ ಪೀಡಿತ ಇಬ್ಬರು ರೋಗಿಗಳು ಸಾವಿಗೀಡಾಗಿದ್ದಾರೆ.

ಮುದ್ದೇಬಿಹಾಳ ತಾಲ್ಲೂಕಿನ ಬಿದರಕುಂದಿ ಗ್ರಾಮ ಪಂಚಾಯ್ತಿ ಸದಸ್ಯ ಸಿದ್ದಲಿಂಗಪ್ಪ ಮಲ್ಲಣ್ಣವರ(48) ಅವರು ಕಪ್ಪು ಶಿಲೀಂಧ್ರದಿಂದ ಸಾವಿಗೀಡಾಗಿದ್ದಾರೆ. ಕೋವಿಡ್‌ನಿಂದ ಬಳಲುತ್ತಿದ್ದ ಅವರು, ಹುಬ್ಬಳ್ಳಿ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಕೋವಿಡ್‌ ಸೋಂಕಿನಿಂದ ಬಳಲುತ್ತಿದ್ದ ಚಡಚಣ ಸಮೀಪದ ಟಾಕಳಿ ಗ್ರಾಮದ ವ್ಯಕ್ತಿಯೊಬ್ಬರು ಮೇ 16ರಂದು ಬಿಎಲ್‌ಡಿಇ ಆಸ್ಪತ್ರೆಗೆ ದಾಖಲಾಗಿದ್ದರು. ಅವರು ಶಂಕಿತ ಕಪ್ಪು ಶಿಲೀಂಧ್ರದಿಂದ ಮೇ 17ರಂದು ಸಾವಿಗೀಡಾಗಿದ್ದಾರೆ ಎಂದು ಬಿಎಲ್‌ಡಿಇ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ರಾಜೇಶ ಹೊನ್ನುಟಗಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೆ 36 ಜನ ಕೋವಿಡ್‌ ಪೀಡಿತರಿಗೆ ಕಪ್ಪು ಶಿಲೀಂಧ್ರ ಕಾಣಿಸಿಕೊಂಡಿದ್ದು, ಉಳಿದವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು