ಶನಿವಾರ, ಅಕ್ಟೋಬರ್ 1, 2022
24 °C

ವಿಜಯಪುರದಲ್ಲಿ ಎರಡು ಮನೆ ಕಳವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ಇಲ್ಲಿನ ಮಲ್ಲಿಕಾರ್ಜುನ ನಗರ ಹಾಗೂ ಶ್ರೀನಗರದಲ್ಲಿ ಎರಡು ಮನೆಗಳಲ್ಲಿ ಮಂಗಳವಾರ ನಸುಕಿನಲ್ಲಿ ಕಳುವಾಗಿದೆ.

ಮಲ್ಲಿಕಾರ್ಜುನ ನಗರದ ಮಲ್ಲನಗೌಡ ಬಿರಾದಾರ ಎಂಬುವವರ ಮನೆಯ ಬಾಗಿಲಿಗೆ ಹಾಕಿದ್ದ ಕೊಂಡಿಯನ್ನು ಕಿಟಕಿ ಮೂಲಕ ತೆಗೆದು ಒಳಪ್ರವೇಶಿಸಿರುವ ಕಳ್ಳರು, ಮನೆಯಲ್ಲಿದ್ದ 120 ಗ್ರಾಂ ಚಿನ್ನಾಭರಣ, ₹ 1 ಲಕ್ಷ ನಗದು ಹಾಗೂ ಮನೆ ಮುಂದೆ ನಿಲ್ಲಿಸಿದ್ದ ಸ್ವಿಫ್ಟ್‌ ಕಾರನ್ನೂ ತೆಗೆದುಕೊಂಡು ಪರಾರಿಯಾಗಿದ್ದಾರೆ.

ಶ್ರೀನಗರದಲ್ಲಿ ಡಾ.ಜಿ.ಎಂ. ಚೌಗಲೆ ಎಂಬುವವವರ ಮನೆಯ ಕಿಟಕಿ ಗ್ರಿಲ್ ಮುರಿದು ಒಳ ಪ್ರವೇಶಿಸಿ ಮನೆಯಲ್ಲಿದ್ದ 20 ಗ್ರಾಂ ಚಿನ್ನ ಹಾಗೂ ನಗದು ಕದ್ದು ಪರಾರಿಯಾಗಿದ್ದಾರೆ.

ಕಳ್ಳರ ಚಲನವಲನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕಳ್ಳರ ಬಂಧನಕ್ಕೆ ಆದರ್ಶನಗರ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು