ಗುರುವಾರ , ಸೆಪ್ಟೆಂಬರ್ 23, 2021
23 °C

ವಿಜಯಪುರ: ಕೋವಿಡ್‌ನಿಂದ ಇಬ್ಬರು ಸಾವು 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ಜಿಲ್ಲೆಯಲ್ಲಿ ಸೋಮವಾರ ಕೋವಿಡ್‌ನಿಂದ ಇಬ್ಬರು ಸಾವಿಗೀಡಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್‌ ಕುಮಾರ ತಿಳಿಸಿದ್ದಾರೆ.

ದೇವರಗೆಣ್ಣೂರ ನಿವಾಸಿ ಕೋವಿಡ್ ಸೋಂಕಿತ 74 ವರ್ಷ ವಯೋಮಾನದ ವೃದ್ಧೆ (ಪಿ 105949) ಅಸ್ತಮಾ, ತೀವ್ರ ಉಸಿರಾಟದ ತೊಂದರೆ, ಜ್ವರದಿಂದ ಬಳಲುತ್ತಿದ್ದರು.  ಜುಲೈ 27ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಆಗಸ್ಟ್‌ 2ರಂದು ಮೃತಪಟ್ಟಿದ್ದಾರೆ ಎಂದು ಹೇಳಿದರು.  

ತಾಳಿಕೋಟಿ ನಿವಾಸಿ 70 ವರ್ಷ ವಯೋಮಾನದ ವೃದ್ಧ (ಪಿ119371) ತೀವ್ರ ಉಸಿರಾಟದ ತೊಂದರೆ, ತೀವ್ರರಕ್ತದೊತ್ತಡದಿಂದ ಬಳಲುತ್ತಿದ್ದರು. ಜುಲೈ 28ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆಗೆ ಸ್ಪಂದಿಸಿದೆ ಜುಲೈ 31ರಂದು ಮೃತಪಟ್ಟಿದ್ದಾರೆ ಎಂದು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು