ಮಂಗಳವಾರ, ಜೂನ್ 22, 2021
28 °C

ಲಾರಿಗಳನ್ನು ತಡೆದು ಚಾಲಕರಿಗೆ ತೊಂದರೆ: ಇಬ್ಬರು ಪೊಲೀಸರ ಅಮಾನತು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ವಿಜಯಪುರ–ಅಥಣಿ ಹೆದ್ದಾರಿಯಲ್ಲಿ ಸಂಚರಿಸುವ ಲಾರಿಗಳನ್ನು ವಿನಾಕಾರಣ ತಡೆದು ನಿಲ್ಲಿಸಿ, ಚಾಲಕರಿಗೆ ತೊಂದರೆ ನೀಡಿ ಅವರಿಂದ ಹಣಕ್ಕೆ ಬೇಡಿಕೆ ಇಟ್ಟಿರುವ ಆರೋಪದ ಮೇರೆಗೆ ಹೈವೇ ಪೆಟ್ರೋಲಿಂಗ್‌ ವಾಹನದಲ್ಲಿ ಕಾರ್ಯ ನಿರ್ವಹಿಸುವ ಇಬ್ಬರು ಪೊಲೀಸ್‌ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅನುಮಪ್‌ ಅಗರವಾಲ್‌ ತಿಳಿಸಿದ್ದಾರೆ.

ತಿಕೋಟಾ ಪೊಲೀಸ್‌ ಠಾಣೆಯ ಎಎಸ್‌ಐ ಎಂ.ಎಸ್‌.ವಾಲಿಕಾರ ಹಾಗೂ ವಿಜಯಪುರ ಡಿಎಆರ್‌ ಘಟಕದ ಎ.ಎಸ್‌.ಐ ಯು.ಬಿ.ಚಿಗರೊಳ್ಳಿ ಅವರನ್ನು ಅಮಾನತು ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಲಾರಿ ಚಾಲಕರಿಂದ ಹಣ ವಸೂಲಿ ಮಾಡುವ ವಿಡಿಯೊ ದೃಶ್ಯಾವಳಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದನ್ನು ಪರಿಶೀಲಿಸಿ, ಇಲಾಖಾ ವಿಚಾರಣೆಯನ್ನು ಬಾಕಿ ಇಟ್ಟು ಕ್ರಮಕೈಗೊಳ್ಳಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು