ವಿಜಯಪುರ: ನಗರದ ಕೆಬಿಎಸ್ ನಂಬರ್ 4ರ ಶಾಲಾ ವಿದ್ಯಾರ್ಥಿನಿಯರೊಂದಿಗೆ ಅಸಭ್ಯ, ಅನುಚಿತ ವರ್ತನೆ ತೋರಿದ ಆರೋಪದ ಮೇರೆಗೆ ಶಿಕ್ಷಕರಿಬ್ಬರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

ವಿಜಯಪುರ ನಗರದ ಸ್ಟೇಷನ್ ರಸ್ತೆಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯ ಹಾಗೂ ಸರ್ಕಾರಿ ಮೆಟ್ರಿಕ್ ಪೂರ್ವ ಪರಿಶಿಷ್ಟ ಪಂಗಡದ ಬಾಲಕಿಯರ ವಸತಿ ನಿಲಯದಿಂದ ಕೆಬಿಎಸ್ ನಂ.4ಕ್ಕೆ ಬರುವ ವಿದ್ಯಾರ್ಥಿನಿಯರೊಂದಿಗೆ ಅಸಭ್ಯ, ಅನುಚಿತವಾಗಿ ವರ್ತಿಸಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮುಖ್ಯ ಶಿಕ್ಷಕ ಜಗದೀಶ ಅಕ್ಕಿ ಹಾಗೂ ಸಹ ಶಿಕ್ಷಕ ಎಂ.ಕೆ. ಪಾಟೀಲ ಅವರ ವಿರುದ್ಧ ಇಲಾಖಾ ವಿಚಾರಣೆ ಕಾಯ್ದಿರಿಸಿ, ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ವಿಜಯಪುರ ನಗರದ ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ ತಳವಾರ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.