ವಿಜಯಪುರ: ‘ಸುಳ್ಳು ಜಾತಿ ಪ್ರಮಾಣ ಪತ್ರಗಳನ್ನು ಕೊಡಿಸುವ ಸ್ಪರ್ಧೆ ರಾಜ್ಯದ ರಾಜಕೀಯ ನಾಯಕರಲ್ಲಿ ನಡೆಯುತ್ತಿದೆ’ ಎಂದು ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಆರೋಪಿಸಿದರು.

‘2020ರಿಂದ ಇಲ್ಲಿಯವರೆಗೂ ಸುಮಾರು 2,39,166 ಸುಳ್ಳು ಜಾತಿ ಪ್ರಮಾಣ ಪತ್ರ ಪಡೆಯಲಾಗಿದೆ. ಅದರಲ್ಲಿ ವಿಜಯಪುರ ಜಿಲ್ಲೆಯಲ್ಲಿ ಸುಮಾರು 56,814 ಸುಳ್ಳು ಜಾತಿ ಪ್ರಮಾಣ ಪತ್ರಗಳನ್ನು ನೀಡಲಾಗಿದೆ’ ಎಂದು ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಸದ್ಯ ಮೀಸಲಾತಿ ಹೆಚ್ಚಳಕ್ಕೆ ಕೋರ್ಟ್ನಿಂದ ತಡೆಯಾಜ್ಞೆ ಇದೆ. ಈ ತಡೆಯಾಜ್ಞೆ ತೆರವುಗೊಳಿಸಲು ರಾಜ್ಯ ಸರ್ಕಾರ ಕೂಡಲೇ ಅರ್ಜಿ ಸಲ್ಲಿಸಬೇಕು. ತಡೆಯಾಜ್ಞೆ ತೆರವು ಆಗದಿದ್ದರೆ ಸುಪ್ರೀಂ ಕೋರ್ಟ್ನಲ್ಲಿ ವಿಶೇಷ ಮೇಲ್ಮನವಿ (ಎಸ್.ಎಲ್.ಪಿ) ಸಲ್ಲಿಸಿ ನಮಗೆ ಪರಿಹಾರ ಕೊಡಿಸುವ ಕೆಲಸ ಮಾಡಬೇಕು, ಒಂದು ವೇಳೆ ಮಾಡದಿದ್ದರೆ ಇದರ ಪರಿಣಾಮ ಎಲ್ಲ ರಾಜಕೀಯ ನಾಯಕರು ಎದುರಿಸಬೇಕಾಗುತ್ತದೆ’ ಎಂದು ಎಚ್ಚರಿಸಿದರು.

‘ರಾಜ್ಯ ಸರ್ಕಾರ 56 ಸಾವಿರ ಉದ್ಯೋಗಗಳನ್ನು ಭರ್ತಿ ಮಾಡಿಕೊಳ್ಳುವುದಾಗಿ ಘೋಷಿಸಿದೆ. ಆದರೆ, ಹೊಸ ಮೀಸಲಾತಿಯನ್ವಯ ಹುದ್ದೆಗಳು ಭರ್ತಿಯಾಗಿದ್ದರೆ ಎಸ್.ಸಿ., ಎಸ್.ಟಿ., ಒಬಿಸಿಗಳಿಗೆ ಹೆಚ್ಚಿನ ಉದ್ಯೋಗಾವಕಾಶಗಳು ದೊರೆಯುತ್ತಿದ್ದವು. ಸರ್ಕಾರಗಳ ನಿರ್ಲಕ್ಷ್ಯದಿಂದ ಎಸ್.ಸಿ., ಎಸ್.ಟಿ., ಒಬಿಸಿಗಳಿಗೆ ಅನ್ಯಾಯವಾಗಿದೆ’ ಎಂದರು.

‘ಬೆಳಗಾವಿ ಅಧಿವೇಶನದಲ್ಲಿ ಎಸ್.ಟಿ. ಮೀಸಲಾತಿಯನ್ನು 9ನೇ ಷೆಡ್ಯೂಲ್ಗೆ ಸೇರಿಸಲು ರೆಸ್ಯೂಲೇಷನ್ ಮಾಡಲಾಗಿದೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಸಚಿವರು, ಅಧಿಕಾರಿಗಳಿಗೆ ಹತ್ತಾರು ಬಾರಿ ಮನವಿ ಮಾಡಿ, ಕೇವಲ ರೆಸ್ಯೂಲೇಷನ್ ಮಾಡಿದರೆ ಆಗುವುದಿಲ್ಲ, ಸರ್ವ ಪಕ್ಷ ಸಭೆ ಕರೆದು ಪ್ರಧಾನಿ ಬಳಿ ನಿಯೋಗ ತೆಗೆದುಕೊಂಡು ಹೋಗಿ ಸಾಮಾಜಿಕ ನ್ಯಾಯಕ್ಕೆ ಹಿನ್ನಡೆಯಾಗುತ್ತಿರುವುದನ್ನು ಮನವರಿಕೆ ಮಾಡಿ ರಾಜ್ಯ ಸರ್ಕಾರ ಮಾಡಿರುವ ಕಾನೂನನ್ನು 9ನೇ ಷೆಡ್ಯೂಲ್ಗೆ ಸೇರಿಸುವ ಕೆಲಸ ಮಾಡಬೇಕು’ ಎಂದು ಒತ್ತಾಯಿಸಿದರು’

‘ಮೀಸಲಾತಿ ಪ್ರಮಾಣ ಜಾಸ್ತಿ ಮಾಡಿ 2023ರಲ್ಲಿಯೇ ಕಳುಹಿಸಿಕೊಟ್ಟರು ಕೇಂದ್ರ ಸರ್ಕಾರ ಇದುವರೆಗೂ ತೀರ್ಮಾನ ತೆಗೆದುಕೊಂಡಿಲ್ಲ. ಸಂಸದರಾದ ರಮೇಶ ಜಿಗಜಿಣಗಿ, ಪ್ರಹ್ಲಾದ ಜೋಶಿ, ವಿ. ಸೋಮಣ್ಣ, ಶೋಭಾ ಕರಂದ್ಲಾಜೆ ಏನು ಮಾಡುತ್ತಿದ್ದೀರಿ? ಅನ್ಯಾಯವಾದಗಲೂ ಮಾತನಾಡಲಾಗುವುದಿಲ್ಲವೇ' ಎಂದು ತರಾಟೆಗೆ ತೆಗೆದುಕೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.