ಶನಿವಾರ, 3 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ| ಕೇಂದ್ರ ಸಚಿವೆ ಸಾಧ್ವಿ ನಿರಂಜನಾ ಜ್ಯೋತಿ ಕಾರು ಅಪಘಾತ

Last Updated 16 ಮಾರ್ಚ್ 2023, 15:41 IST
ಅಕ್ಷರ ಗಾತ್ರ

ವಿಜಯಪುರ: ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣೆ ರಾಜ್ಯ ಸಚಿವೆ ಸಾಧ್ವಿ ನಿರಂಜನಾ ಜ್ಯೋತಿ ಪ್ರಯಾಣ ಮಾಡುತ್ತಿದ್ದ ಕಾರು ವಿಜಯಪುರ ತಾಲ್ಲೂಕಿನ ಜುಮನಾಳ ಗ್ರಾಮದ ಬಳಿ ವಿಜಯಪುರ‌ - ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಅಪಘಾತಕ್ಕೆ ಒಳಗಾಗಿದೆ.

ಕೇಂದ್ರ ಸಚಿವೆ ಪ್ರಯಾಣ ಮಾಡುತ್ತಿದ್ದ ಕಾರು ಹಾಗೂ ಕ್ಯಾಂಟರ್ ಮಧ್ಯೆ ಡಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ ಕೇಂದ್ರ ಸಚಿವರಿಗೆ ಹಾಗೂ ಕಾರಿನ ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿದೆ. ಗಾಯಗೊಂಡ ಕೇಂದ್ರ‌‌ ಸಚಿವೆ ಸಾದ್ವಿ ನಿರಂಜನಾ‌ ಜ್ಯೋತಿ ಹಾಗೂ ಕಾರು ಚಾಲಕನನ್ನು ವಿಜಯಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾರಿಗೂ ಗಂಭೀರ ಗಾಯವಾಗಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ವಿಜಯಪುರ ನಗರದಲ್ಲಿ ಗುರುವಾರ ನಡೆದ ಬಿಜೆಪಿ ಮಹಿಳಾ ಸಮಾವೇಶದಲ್ಲಿ ಭಾಗಿಯಾಗಿದ್ದ ಕೇಂದ್ರ ಸಚಿವೆ ಬಳಿಕ ಬಾಗಲಕೋಟೆಯತ್ತ ಪ್ರಯಾಣಿಸುತ್ತಿದ್ದ ವೇಳೆ ಅಪಘಾತವಾಗಿದೆ.

ಅಪಘಾತದ ಪರಿಣಾಮ‌ ಎನ್ಎಚ್ 50ರಲ್ಲಿ ಸಂಚಾರಕ್ಕೆ ಅಡಚಣೆಯಾಯಿತು. ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸರ ಭೇಟಿ ನೀಡಿ ವಾಹನ ಸಂಚಾರ ಸುಗಮಗೊಳಿಸಿದರು. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ‌ ನಡೆದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT