ಮಂಗಳವಾರ, ಸೆಪ್ಟೆಂಬರ್ 29, 2020
22 °C

ಯುಪಿಎಸ್‌ಸಿ | ವಿಜಯಪುರದ ಸವಿತಾ ಗೋಟ್ಯಾಳಗೆ 626ನೇ ರ‌್ಯಾಂಕ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ಯುಪಿಎಸ್‌ಸಿ ಪರೀಕ್ಷೆಯಲ್ಲಿ ವಿಜಯಪುರದ ಸವಿತಾ ಗೋಟ್ಯಾಳ 626ನೇ ರ‌್ಯಾಂಕ್ ಪಡೆಯುವ ಮೂಲಕ ಉತ್ತಮ ಸಾಧನೆ ಮಾಡಿದ್ದಾರೆ.

ಸವಿತಾ ಅವರ ಅಕ್ಕ ಅಶ್ವಿನಿ ಗೋಟ್ಯಾಳ  ಈಗಾಗಲೇ ಐಪಿಎಸ್ ಅಧಿಕಾರಿಯಾಗಿದ್ದು, ಸದ್ಯ ಪಂಜಾಬಿನ ಲುಧಿಯಾನಾದಲ್ಲಿ ಎಡಿಜಿಪಿಯಾಗಿದ್ದಾರೆ. ಇನ್ನು ಇವರ ತಂದೆ ಸಿದ್ದಪ್ಪ ಗೋಟ್ಯಾಳ ಬಿ ಎಸ್ ಎನ್ ಎಲ್ ನಲ್ಲಿ ನೌಕರರಾಗಿದ್ದರು.

ಹಿರಿಯ ಮಗಳು ಐಪಿಎಸ್ ಅಧಿಕಾರಿಯಾಗುತ್ತಿದ್ದಂತೆ ಸ್ವಯಂ ನಿವೃತ್ತಿ ಪಡೆದಿದ್ದಾರೆ. ಹೆಣ್ಣು ಮಕ್ಕಳಿಬ್ಬರ ಸಾಧನೆಯಿಂದ ಗೋಟ್ಯಾಳ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು