ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಟಿಪ್ಪು ಭಾವಚಿತ್ರಕ್ಕೆ ಅವಮಾನಕ್ಕೆ ಖಂಡನೆ

Published 1 ಫೆಬ್ರುವರಿ 2024, 14:04 IST
Last Updated 1 ಫೆಬ್ರುವರಿ 2024, 14:04 IST
ಅಕ್ಷರ ಗಾತ್ರ

ಸಿಂದಗಿ: ರಾಯಚೂರು ಜಿಲ್ಲೆ ಸಿರವಾರದಲ್ಲಿ ಟಿಪ್ಪು ಸುಲ್ತಾನ ಭಾವಚಿತ್ರಕ್ಕೆ ಅವಮಾನಗೊಳಿಸಿರುವ ಘಟನೆಯನ್ನು ಖಂಡಿಸಿ ದಲಿತ ಸೇನೆ ಕಾರ್ಯಕರ್ತರು ಇಲ್ಲಿಯ ತಾಲ್ಲೂಕು ಆಡಳಿತ ಸೌಧದ ಎದುರು ಗುರುವಾರ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ದಲಿತ ಸೇನೆ ರಾಜ್ಯ ಘಟಕದ ಉಪಾಧ್ಯಕ್ಷ ಎಂ.ಎ.ಸಿಂದಗಿಕರ ಮಾತನಾಡಿ, ಹಜರತ್ ಟಿಪ್ಪು ಸುಲ್ತಾನರ ಭಾವಚಿತ್ರಕ್ಕೆ ವಿಕೃತ ಮನಸ್ಸಿನ ಕಿಡಿಗೇಡಿಗಳು ಇಂಥ ಕುಕೃತ್ಯ ಎಸಗಿದ್ದಾರೆ. ಇಂಥ ಘಟನೆಗಳು ಪದೇ, ಪದೇ ಮರುಕಳಿಸುವುದು ಅತ್ಯಂತ ನಾಚಿಕೆಗೇಡು ಸಂಗತಿ ಎಂದರು.

ಪೊಲೀಸ್ ಇಲಾಖೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕೋಮು ಗಲಭೆಗೆ ಪ್ರಚೋದನೆ ಮಾಡಿ ಸಮಾಜದ ಸಾಮರಸ್ಯ ಹಾಳು ಮಾಡಲು ಯತ್ನಿಸುತ್ತಿರುವ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಿ ರಾಜ್ಯದಿಂದ ಗಡಿಪಾರು ಮಾಡಬೇಕು. ಈ ಕುಕೃತ್ಯದ ಹಿಂದೆ ಇರುವ ಕಾಣದ ಕೈಗಳನ್ನು ಪತ್ತೆ ಹಚ್ಚಿ ಕೋಕಾ ಕಾಯ್ದೆಯಡಿ ಅವರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಅವರು ಆಗ್ರಹಿಸಿದರು.

ತಹಶೀಲ್ದಾರ್‌ ಪ್ರದೀಪಕುಮಾರ ಹಿರೇಮಠ ಅವರಿಗೆ ಮನವಿ ಸಲ್ಲಿಸಿದರು.

ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಖಾಜೂ ಹೊಸಮನಿ, ತಾಲ್ಲೂಕು ಘಟಕದ ಅಧ್ಯಕ್ಷ ಬಾಲಕೃಷ್ಣ ಚಲವಾದಿ, ನಗರ ಘಟಕ ಅಧ್ಯಕ್ಷ ದಸ್ತಗೀರ ಆಳಂದ ಹಾಗೂ ಶಾಹುಸೇನಿ ಬುಕ್ಕದ, ಮೈಬೂಬ ಆಳಂದ, ಜಾವೀದ ಕರ್ಜಗಿ, ಅಲ್ಲಾಭಕ್ಷ ಆಳಂದ, ಸಲೀಂ ಬಾಗವಾನ, ಆಸ್ಫಾಕ್ ಮಕಾಂದಾರ, ಇಬ್ರಾಹಿಂ ತಾಂಬೋಳಿ ಮುನ್ನಾ ಭೈರೋಡಗಿ ಪ್ರತಿಭಟನೆ ನೇತೃತ್ವ ವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT