ವಿಜಯಪುರ: ಜಿಲ್ಲೆಯಲ್ಲಿ ಗೃಹಬಳಕೆ ಎಲ್ಪಿಜಿ ಗ್ಯಾಸ್ ಸರಬರಾಜು ಸಮರ್ಪಕವಾಗಿ ನಡೆಯುತ್ತಿದೆ. ಗೃಹ ಬಳಕೆ ಸಿಲಿಂಡರನ್ನು 25 ದಿನಗಳ ಬಳಿಕವೇ ಬುಕ್ ಮಾಡಲು ಅವಕಾಶ ಕಲ್ಪಿಸಲಾಗಿರುತ್ತದೆ. ಹಾಗಾಗಿ ಗ್ರಾಹಕರು ಅಡುಗೆ ಅನಿಲವನ್ನು ಮಿತ ಬಳಕೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ.ಆನಂದ ಕೆ. ಹೇಳಿದರು.

ಸಮರ್ಪಕ ಪೂರೈಕೆಗಾಗಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಎಲ್ಪಿಜಿ ವಿತರಕರೊಂದಿಗೆ ಈಗಾಗಲೇ ಸಮಾಲೋಚನೆ ನಡೆಸಲಾಗಿದ್ದು, ಗೃಹಬಳಕೆ ಗ್ಯಾಸ್ ಸಿಲಿಂಡರ್ಗಳ ಸಮರ್ಪಕ ಸಂಗ್ರಹ ಮತ್ತು ಸರಬರಾಜು ಲಭ್ಯವಿರುವುದನ್ನು ದೃಢಪಡಿಸಿ ಎಂದಿನಂತೆ ಎಲ್ಪಿಜಿ ವಿತರಕರು ಗ್ರಾಹಕರಿಗೆ ಮನೆಬಾಗಿಲಿಗೆ ಸರಬರಾಜು ಮಾಡಲಾಗುವುದು. ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ಎಲ್ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಹಾಗಾಗಿ ಸಾರ್ವಜನಿಕರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗದೆ, ಅಗತ್ಯವಿರುವ ಪ್ರಮಾಣದಲ್ಲಿ ಮಾತ್ರ ಗ್ಯಾಸ್ ಸಿಲಿಂಡರ್ ಪಡೆಯಬೇಕು. ಎಲ್ಪಿಜಿ ವಿತರಣೆಯಲ್ಲಿ ಏನಾದರೂ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ 7022026569 ಅಥವಾ 9449517417 ಈ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ತಿಳಿಸಿದ್ದಾರೆ.

ಯಾವುದೇ ಅನಧಿಕೃತ ಗ್ಯಾಸ್ ಸಿಲಿಂಡರ್ ಸಂಗ್ರಹಣೆ ಅಥವಾ ಅಕ್ರಮ ಮಾರಾಟ ಕಂಡುಬಂದಲ್ಲಿ ಅಗತ್ಯ ವಸ್ತುಗಳ ಕಾಯ್ದೆ 1955 ಹಾಗೂ ಸಂಬಂಧಿತ ನಿಯಂತ್ರಣ ಆದೇಶಗಳಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಸಹಕರಿಸಿ ಗೃಹಬಳಕೆ ಗ್ಯಾಸ್ ಸಮರ್ಪಕ ವಿತರಣೆ ವ್ಯವಸ್ಥೆ ಸುಗಮವಾಗಿ ನಡೆಯಲು ಸಹಕರಿಸಬೇಕು ಎಂದವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.