ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಚೂಣಿ ಕಾರ್ಯಕರ್ತರಿಗೆ ವಾರದೊಳಗೆ ಲಸಿಕೆ

ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಸೂಚನೆ
Last Updated 8 ಜೂನ್ 2021, 15:55 IST
ಅಕ್ಷರ ಗಾತ್ರ

ವಿಜಯಪುರ: ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ 18 ರಿಂದ 45 ವರ್ಷ ವಯೋಮಾನದ ಮುಂಚೂಣಿ ಕಾರ್ಯಕರ್ತರನ್ನು ತಾಲ್ಲೂಕುಮಟ್ಟದ ನೋಡಲ್ ಅಧಿಕಾರಿಗಳು ಗುರುತಿಸಿ ಒಂದು ವಾರದಲ್ಲಿ ಕೋವ್ಯಾಕ್ಸಿನ್ ಎರಡನೇ ಲಸಿಕೆ ದೊರಕಿಸುವಂತೆ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಸೂಚಿಸಿದರು.

ಜಿಲ್ಲಾ ಪಂಚಾಯ್ತಿ ಸಭಾಭವನದಲ್ಲಿ ನಡೆದ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ನೋಡಲ್ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಪ್ರತಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮೊಬೈಲ್ ಲಸಿಕಾ ತಂಡ ನೇಮಕ ಮಾಡಲಾಗಿದ್ದು, ಈ ತಂಡಗಳು 45 ವರ್ಷ ಮೇಲ್ಪಟ್ಟ ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ ಹಾಕಿಸಲು ಕ್ರಮಕೈಗೊಳ್ಳಬೇಕು. ಕೋವ್ಯಾಕ್ಸಿನ್ ಎರಡನೇ ಲಸಿಕೆಯನ್ನು ಮಾತ್ರ ಕೊಡಿಸಬೇಕು ಎಂದು ಹೇಳಿದರು.

ಅಂಗವಿಕಲರು,ಕಟ್ಟಡ ಕಾರ್ಮಿಕರು ತಮ್ಮ ಗುರುತಿನ ಚೀಟಿಯೊಂದಿಗೆ ಲಸಿಕಾ ಕೇಂದ್ರಕ್ಕೆ ಬಂದು ಕೋವಿಡ್‌ ಲಸಿಕೆ ಹಾಕಿಸಿಕೊಳ್ಳಬಹುದಾಗಿದೆ.ಯಾವುದೇ ಕಾರಣಕ್ಕೂ ಇದರಲ್ಲಿ ಕುಟುಂಬ ಸದಸ್ಯರಿಗೆ ಅವಕಾಶವಿರುವುದಿಲ್ಲ ಎಂದು ಹೇಳಿದರು.

ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಎಲ್ಲಾ ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ ಹಾಕಿಸಿಕೊಳ್ಳುವಂತೆ ನೋಡಿಕೊಳ್ಳಬೇಕು ಹಾಗೂ ಅವರ ಮೇಲೆ ನಿಗಾ ವಹಿಸಬೇಕು ಎಂದು ತಿಳಿಸಿದರು.

ಜಿಲ್ಲೆಯಲ್ಲಿ 62 ಲಸಿಕಾ ಕೇಂದ್ರಗಳನ್ನು ತೆರೆಯಲಾಗಿದ್ದು, ಇದರಲ್ಲಿ 9 ಸಿ.ಎಚ್. ಸಿ ಇವೆ. ತಾಲ್ಲೂಕು ಮಟ್ಟದ ಆಸ್ಪತ್ರೆಗಳಲ್ಲಿ ಲಸಿಕೆಗೆ ಅವಕಾಶ ಕಲ್ಪಿಸಲಾಗಿದೆ ಎಂದರು.

ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗೋವಿಂದರೆಡ್ಡಿ, ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ ಕಳಸದ, ಉಪವಿಭಾಗಾಧಿಕಾರಿ ಬಲರಾಮ್ ಲಮಾಣಿ , ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ. ಮಹೇಶ ನಾಗರಬೆಟ್ಟ ಸಭೆಯಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT