ಸೋಮವಾರ, ಮೇ 23, 2022
26 °C

ವಿಜಯಪುರಕ್ಕೆ ವಿಜಯಮಹಾಂತೇಶ್‌ ನೂತನ ಜಿಲ್ಲಾಧಿಕಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಜಿಲ್ಲಾಧಿಕಾರಿ ಪಿ.ಸುನೀಲ್‌ ಕುಮಾರ್‌ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ್ದು, ಅವರ ಸ್ಥಾನಕ್ಕೆ ವಿಜಯಮಹಾಂತೇಶ್‌ ಬಿ. ದಾನಮ್ಮನವರ ನೂತನ ಜಿಲ್ಲಾಧಿಕಾರಿಯಾಗಿ ನಿಯೋಜನೆಯಾಗಿದ್ದಾರೆ.

ವಿಜಯಮಹಾಂತೇಶ್‌ ಅವರು 2013ನೇ ಸಾಲಿನ ಐಎಎಸ್‌ ಅಧಿಕಾರಿಯಾಗಿದ್ದಾರೆ. ಈ ಹಿಂದೆ ಅವರು ಬಾಗಲಕೋಟೆ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ, ದಾವಣಗೆರೆ ಜಿಲ್ಲಾ ಪಂಚಾಯ್ತಿ ಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ವಿಶೇಷ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ. 

ಜಿಲ್ಲೆಯಿಂದ ವರ್ಗಾವಣೆಯಾಗಿರುವ ಸುನೀಲ್‌ ಕುಮಾರ್‌ ಅವರಿಗೆ ಇನ್ನೂ ಯಾವುದೇ ಸ್ಥಳ ಸೂಚಿಸಿಲ್ಲ.  ಸುನೀಲ್‌ ಕುಮಾರ್‌ ಅವರು ವಿಜಯಪುರ ನಗರದ ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆಗಾಗಿ ವಿಶೇಷ ಆಸಕ್ತಿ ವಹಿಸಿದ್ದರು. ಪ್ರತಿ ತಿಂಗಳಿಗೊಮ್ಮೆ ‘ಹೆರಿಟೇಜ್‌ ವಾಕ್‌’ ಹೆಸರಲ್ಲಿ ಸ್ಮಾರಕಗಳಿಗೆ ಭೇಟಿ ನೀಡಿ, ಅಲ್ಲಿ ಸ್ವಚ್ಛತೆ, ಅಭಿವೃದ್ಧಿ ಕಾರ್ಯಗಳಿಗೆ ಒತ್ತು ನೀಡಿದ್ದರು. ಅಲ್ಲದೇ, ಜನಪರ ಕಾರ್ಯಗಳಿಂದ ಮೆಚ್ಚುಗೆಗೆ ಪಾತ್ರವಾಗಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು