ಮಂಗಳವಾರ, ಮಾರ್ಚ್ 9, 2021
29 °C

ಪತ್ನಿ ಕೊಲೆಗೆ ಯತ್ನಿಸಿದ್ದ ಪತಿಗೆ ಆರು ವರ್ಷ ಜೈಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ಪತ್ನಿ ಕೊಲೆಗೆ ಯತ್ನಿಸಿದ್ದ ಪತಿಗೆ ಜಿಲ್ಲಾ ಸೆಷನ್ಸ್‌ ನ್ಯಾಯಾಲಯವು ಆರು ವರ್ಷ ಜೈಲು ಶಿಕ್ಷೆ ಹಾಗೂ ₹ 15 ಸಾವಿರ ದಂಡ ವಿಧಿಸಿದೆ.

ಪ್ರಕರಣದ ವಿವರ:

ಸಿಂದಗಿ ತಾಲ್ಲೂಕಿನ ಗಣಿಯಾರ ಗ್ರಾಮದ ಶರಣಗೌಡ ಕಾಶ್ಯಾಪೂರ ತನ್ನ ಪತ್ನಿ ನೀಲಮ್ಮಳ ಶೀಲದ ಬಗ್ಗೆ ಅನುಮಾನ ವ್ಯಕ್ತಪಡಿಸಿ ದೈಹಿಕ, ಮಾನಸಿಕ ಹಿಂಸೆ ನೀಡುತ್ತಿದ್ದನು. ಇದರಿಂದ ಬೇಸತ್ತ ನೀಲಮ್ಮ ತನ್ನ ಮಗನೊಂದಿಗೆ ತಮ್ಮ ಹೊಲದಲ್ಲಿ ಗುಡಿಸಲು ನಿರ್ಮಿಸಿಕೊಂಡು ವಾಸವಾಗಿದ್ದರು.   

2018ರ ಜೂನ್‌ 4ರಂದು ಆರೋಪಿ ಪತಿಯು ಗುಡಿಸಿಲಿಗೆ ಬೆಂಕಿ ಹಚ್ಚಿ ಪತ್ನಿ ಕೊಲೆಗೆ ಯತ್ನಿಸಿದ್ದನು. ಈ ಸಂದರ್ಭದಲ್ಲಿ ಪ್ರಶ್ನಿಸಲು ಹೋದ ಮಗನಿಗೆ ಮಚ್ಚಿನಿಂದ ಹೊಡೆದು ತೀವ್ರವಾಗಿ ಗಾಯಗೊಳಿಸಿದ್ದನು. ಗುಡಿಸಿಲಿಗೆ ಬೆಂಕಿ ಹಚ್ಚಿದ್ದರಿಂದ ₹ 2ಸಾವಿರ ನಗದು, ₹ 10 ಸಾವಿರ ಮೌಲ್ಯದ ಆಹಾರ ಸಾಮಗ್ರಿಗಳು, ಪಾತ್ರೆಗಳು ಸುಟ್ಟು ಹೋಗಿದ್ದವು. ಈ ಸಂಬಂಧ ಸಿಂದಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 

ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಸೆಷನ್ಸ್‌ ನ್ಯಾಯಾಧೀಶ ಸದಾನಂದ ಎನ್‌.ನಾಯ್ಕ್‌ ಅವರು ಸಾಕ್ಷಿ, ಪುರಾವೆಗಳನ್ನು ಅವಲೋಕಿಸಿ, ಆಪಾದನೆ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ವಿಧಿಸಿ ಸೋಮವಾರ ತೀರ್ಪು ನೀಡಿದ್ದಾರೆ.

ಸರ್ಕಾರದ ಪರವಾಗಿ ಪ್ರಧಾನ ಸರ್ಕಾರಿ ಅಭಿಯೋಜಕ ಕೆ.ಕೆ.ಕುಲಕರ್ಣಿ ವಾದ ಮಂಡಿಸಿದ್ದರು ಎಂದು ಪ್ರಧಾನ ಸರ್ಕಾರಿ ಅಭಿಯೋಜಕರಾದ ವನಿತಾ ಎಸ್‌.ಇಟಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು