ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ ಜಿ.ಪಂ. ನೂತನ ಸಿಇಒ ರಾಹುಲ್ ಸಿಂಧೆ ಅಧಿಕಾರ ಸ್ವೀಕಾರ

Last Updated 7 ಫೆಬ್ರುವರಿ 2022, 12:32 IST
ಅಕ್ಷರ ಗಾತ್ರ

ವಿಜಯಪುರ: ಜಿಲ್ಲಾ ಪಂಚಾಯ್ತಿ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ರಾಹುಲ್ ಸಿಂಧೆ ಅವರು ಸೋಮವಾರ ಅಧಿಕಾರಿ ಸ್ವೀಕರಿಸಿದರು.

ಬೀದರ್ ಮೂಲದ ಸಿಂಧೆ ಅವರು ಐಐಟಿ ಬಾಂಬೆಯಿಂದ ಬಿ.ಟೆಕ್ ಪದವಿ ಪಡೆದಿದ್ದಾರೆ.

2018ರ ಐಎಎಸ್ ಬ್ಯಾಚ್‍ನ ರಾಹುಲ್ ಸಿಂಧೆ ಅವರು ಮಂಗಳೂರಿನಲ್ಲಿ ಪ್ರೊಬೇಷನರಿ ಅವಧಿ ಪೂರೈಸಿದ್ದಾರೆ. ಬಳಿಕ ಅವರು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಹಶೀಲ್ದಾರ್ ಆಗಿ ಕೆಲಸ ಮಾಡಿದ್ದಾರೆ. ನಂತರ ಅವರು ಇಂಡಿ ಉಪವಿಭಾಗಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಇದೀಗ ಅವರು ವಿಜಯಪುರ ಜಿಲ್ಲಾ ಪಂಚಾಯ್ತಿ ನೂತನ ಸಿಇಒ ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ.

‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ರಾಹುಲ್‌ ಸಿಂಧೆ ಅವರು, ಇಂಡಿ ಉಪ ವಿಭಾಗಾಧಿಕಾರಿಯಾಗಿ ಈಗಾಗಲೇ ಕಾರ್ಯನಿರ್ವಹಿಸಿರುವುದರಿಂದವಿಜಯಪುರ ಜಿಲ್ಲೆಯ ಕುರಿತು ಒಂದಷ್ಟು ಅನುಭವ ಇದೆ. ಈ ಅನುಭವದೊಂದಿಗೆ ಎಲ್ಲ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಯೊಂದಿಗೆ ಜನರಿಗೆ ಅನುಕೂಲಕರವಾದ ಕೆಲಸ, ಕಾರ್ಯಗಳನ್ನು ಮಾಡಲಾಗುವುದು ಎಂದು ಹೇಳಿದರು.

ಸರ್ಕಾರದ ಕಾರ್ಯಕ್ರಮಗಳು ಜನಸಾಮಾನ್ಯರಿಗೆ ತಲುಪಿಸಲು ಮೊದಲ ಆದ್ಯತೆ ನೀಡಲಾಗುವುದು. ಕೋವಿಡ್‌ ನಿರ್ವಹಣೆ ಹಾಗೂ ಲಸಿಕಾಕರಣದಲ್ಲಿ ಜಿಲ್ಲಾಡಳಿತದೊಂದಿಗೆ ಆದ್ಯತೆ ಮೇರೆಗೆ ಕಾರ್ಯನಿರ್ವಹಿಸಲಾಗುವುದು ಎಂದರು.

ನಿರ್ಗಮಿತ ಸಿಇಒ ಗೋವಿಂದ ರೆಡ್ಡಿ ಅವರನ್ನು ಬೀದರ್ ಜಿಲ್ಲಾಧಿಕಾರಿ ಹುದ್ದೆಗೆ ವರ್ಗಾಯಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT