ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ ಗೋದಾಮು ದುರಂತ: ಆರೋಪಿಗಳಿಗೆ ಜಾಮೀನು

Published 7 ಡಿಸೆಂಬರ್ 2023, 14:47 IST
Last Updated 7 ಡಿಸೆಂಬರ್ 2023, 14:47 IST
ಅಕ್ಷರ ಗಾತ್ರ

ವಿಜಯಪುರ: ಬಿಹಾರದ ಏಳು ಜನ ಕೂಲಿಕಾರ್ಮಿಕರ ಸಾವಿಗೆ ಕಾರಣವಾಗಿದ್ದ ಇಲ್ಲಿನ ಅಲಿಯಾಬಾದ್‌ ಕೈಗಾರಿಕಾ ಪ್ರದೇಶದ ‘ರಾಜ್‌ಗುರು’ ಫುಡ್ಸ್‌ ಗೋದಾಮಿನ ಮಾಲೀಕ ಕಿಶೋರ್ ಜೈನ್ ಮತ್ತು ಸುಪರ್‌ವೈಜ‌ರ್ ಪ್ರಕಾಶ ದುಮಗೊಂಡ  ಅವರನ್ನು ಪೊಲೀಸರು ಗುರುವಾರ ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದರು.

ಆರೋಪಿಗಳಿಗೆ ನ್ಯಾಯಾಲಯದಲ್ಲಿ ಜಾಮೀನು ದೊರೆತ ಹಿನ್ನೆಲೆಯಲ್ಲಿ ಬಿಡುಗಡೆಯಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ ತಿಳಿಸಿದರು.

ಗೋದಾಮಿನಲ್ಲಿ ಕಾರ್ಮಿಕರ ರಕ್ಷಣೆಗೆ ಯಾವುದೇ ಮುಂಜಾಗ್ರತಾ ಕ್ರಮವಹಿಸದೇ ಇರುವುದು ಹಾಗೂ ಯಂತ್ರೋಪಕರಣ ದುರಸ್ತಿ ಇದೆ ಎಂದು ಗೊತ್ತಿದ್ದರೂ ಕೂಡಾ ನಿರ್ಲಕ್ಷ್ಯ ತೋರಿದ ಆರೋಪದ ಮೇರೆಗೆ ವಿಜಯಪುರ ಎಪಿಎಂಸಿ ಠಾಣೆಯಲ್ಲಿ ದೂರು ದಾಖಲಾಗಿತ್ತು. ದುರಂತ ನಡೆದ ಬಳಿಕ ಆರೋಪಿಗಳು ನಾಪತ್ತೆಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT