18 ವರ್ಷ ವಯಸ್ಸಿನ ಒಳಗಿನವರಿಗೆ ಬೈಕ್ ಓಡಿಸಲು ಕೊಟ್ಟರೆ ಅವರ ತಂದೆ ತಾಯಿ ಮೇಲೆ ಪ್ರಕರಣ ದಾಖಲಿಸಲಾಗುತ್ತದೆ. ಟಂಟಂ, ಗೂಡ್ಸ್ ವಾಹನಗಳ ವಾಹನ ಚಾಲಕರಿಗೂ ರಸ್ತೆ ನಿಯಮಗಳ ಕುರಿತು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಂದ ಹಾಗೂ ಪೊಲೀಸ್ ಇಲಾಖೆಯಿಂದ ಕಟ್ಟುನಿಟ್ಟಾಗಿ ಸೂಚನೆಗಳನ್ನು ನೀಡಿರುತ್ತೇವೆ. ಬೈಕ್ ಸವಾರರು ಹೆಲ್ಮೆಟ್ ಧರಿಸಬೇಕು. ಗೂಡ್ಸ್ ಚಾಲಕರು ಸಾರಿಗೆ ನಿಯಮಗಳಂತೆ ವಾಹನಗಳನ್ನು ಓಡಿಸಬೇಕು. ಅಪಘಾತಗಳಾಗದಂತೆ ಮುನ್ನೆಚ್ಚರಿಕೆ ವಹಿಸಿ ಅಮಾಯಕರ ಜೀವ ಹಾನಿ ತಪ್ಪಿಸಬೇಕು ಎಂದು ಎಸ್ಪಿ ತಿಳಿಸಿದರು. ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ,ಪಿಎಸ್‌ಐ ಸಂಜಯ ತಿಪರೆಡ್ಡಿ ಇದ್ದರು.
ಅಪಘಾತದ ಸ್ಥಳಕ್ಕೆ ಎಸ್ಪಿ ಭೇಟಿ: ಕುಂಟೋಜಿ ಸಮೀಪದಲ್ಲಿ ಗುರುವಾರ ರಾತ್ರಿ ಸಂಭವಿಸಿದ ಬೈಕ್ ಅಪಘಾತದ ಸ್ಥಳಕ್ಕೆ ಎಸ್ಪಿ ಋಷಿಕೇಶ ಸೋನಾವಣೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪಿಎಸ್‌ಐ ಸಂಜಯ ತಿಪರೆಡ್ಡಿ ಇದ್ದರು.