ವಿಜಯಪುರ: ಪೊಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ ಜಿಲ್ಲಾ ಸೆಷನ್ಸ್ ಕೋರ್ಟ್( ವಿಶೇಷ ಪೊಕ್ಸೋ ನ್ಯಾಯಲಯ) 20 ವರ್ಷ ಕಠಿಣ ಶಿಕ್ಷೆ ಮತ್ತು ₹25 ಸಾವಿರ ದಂಡ ವಿಧಿಸಿದೆ.

ಹಿಟ್ನಳ್ಳಿ ಗ್ರಾಮದ ಹಾಲಿ ವಿಜಯಪುರ ನಗರದ ಶಿಕಾರಖಾನೆ ನಿವಾಸಿಯಾದ ಆರೋಪಿ ಯಮನಪ್ಪ ಮಾದರ(40) ವಿರುದ್ಧ 2023ರಲ್ಲಿ ವಿಜಯಪುರ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೊಕ್ಸೋ ಪ್ರಕರಣ ದಾಖಲಾಗಿತ್ತು.

ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ವಿ.ಜಿ.ಹಗರಗೊಂಡ ಅವರು ಆರೋಪಿ ವಿರುದ್ಧ ವಾದ ಮಂಡಿಸಿದ್ದರು. ತನಿಖಾಧಿಕಾರಿ ಪೊಲೀಸ್ ಇನ್ಸ್ಟೆಕ್ಟರ್ ಜಯವಂತ ದುಲಾರಿ ಮತ್ತು ಪೊಲೀಸ್ ಇನ್ ಸ್ಪೆಕ್ಟರ್ ರಾಯಗೊಂಡ ಜಾನರ್, ಸಿಪಿಐ ವಿಜಯ ಕೋಟ್ಯಾಳ ಹಾಗೂ ಮಹಿಳಾ ಪೊಲೀಸ್ ಠಾಣೆಯ ಸಿಬ್ಬಂದಿ ಉತ್ತಮ ಕಾರ್ಯ ನಿರ್ವಹಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಪ್ರಕಟಣೆಯಲ್ಲಿ ಶ್ಲಾಘಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.