ವಿಜಯಪುರ: ‘ಸೇವಾ ನಿವೃತ್ತಿ ಹೊಂದುತ್ತಿರುವ ಕೆ. ಕೆ. ಚವ್ಹಾಣ ಅವರು ಸಂಘಟಿತ ಆಡಳಿತ ಮತ್ತು ಎಲ್ಲರನ್ನೂ ಒಳಗೊಳ್ಳುವ ಅದ್ಭುತ ಸ್ವಭಾವವನ್ನು ಹೊಂದಿದ್ದರು. ಅಧೀನ ಅಧಿಕಾರಿಗಳಿಗೆ ಸೂಕ್ತ ಮಾರ್ಗದರ್ಶನ ನೀಡುತ್ತಿದ್ದರು’ ಎಂದು ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಸುಮಾರು 32 ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಕೆ. ಕೆ. ಚವ್ಹಾಣ ಅವರಿಗೆ ಇಲ್ಲಿನ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಕೆ. ಕೆ. ಚವ್ಹಾಣ ಅವರು, ‘ನನ್ನ ಸುದೀರ್ಘ ವೃತ್ತಿ ಜೀವನದಲ್ಲಿ ಇಲಾಖೆಯ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸಲು ಹೆಗಲಿಗೆ ಹೆಗಲು ಕೊಟ್ಟು ಸಹಕರಿಸಿದ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರ ಸಹಕಾರ ಅನನ್ಯವಾದದ್ದು’ ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ ಹಾಗರಗಿ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಪ್ರಕಾಶ ವಡ್ಡರ, ಮುಖ್ಯ ಲೆಕ್ಕಾಧಿಕಾರಿ ರಾಮಣ್ಣ ಅಥಣಿ, ಮುಖ್ಯ ಯೋಜನಾ ನಿರ್ದೇಶಕ ಸಿ.ಬಿ ಕುಂಬಾರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ದೀಪಾ ಕಾಳೆ, ಕ್ರೀಡಾಧಿಕಾರಿ ರಾಜಶೇಖರ ಧೈವಾಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ವಾರ್ತಾಧಿಕಾರಿ ಅಮರೇಶ ದೊಡಮನಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-26-71681363

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.