ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ 3ನೇ ಅಲೆ ಎದುರಿಸಲು ಸಜ್ಜು- ವಿಜಯಪುರ ಜಿಲ್ಲಾಧಿಕಾರಿ ಪಿ.ಸುನೀಲ್‌ ಕುಮಾರ್

Last Updated 7 ಜನವರಿ 2022, 11:17 IST
ಅಕ್ಷರ ಗಾತ್ರ

ವಿಜಯಪುರ: ಜಿಲ್ಲೆಯಲ್ಲಿ ಕೋವಿಡ್‌ ಮೂರನೇಅಲೆಯನ್ನು ಸಮರ್ಪಕವಾಗಿ ನಿರ್ವಹಿಸಲು ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್‌ ಕುಮಾರ್ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ 14 ಸರ್ಕಾರಿ ಆಸ್ಪತ್ರೆ ಹಾಗೂ 162 ಖಾಸಗಿ ಆಸ್ಪತ್ರೆಗಳು ಸೇರಿದಂತೆ ಒಟ್ಟು 176 ಆಸ್ಪತ್ರೆಗಳಲ್ಲಿ ಕೋವಿಡ್‌ ಚಿಕಿತ್ಸೆಗಾಗಿ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

ಜಿಲ್ಲೆಯ ಖಾಸಗಿ ಹಾಗೂ ವೈದ್ಯಕೀಯ ಕಾಲೇಜುಗಳಲ್ಲಿ ಪ್ರತಿಯೊಂದು ವಿಭಾಗದಲ್ಲಿ (ಐಸಿಯು, ವೆಂಟಿಲೇಟರ್‌ಗಳೊಂದಿಗೆ ಐಸಿಯು, ಎಚ್‍ಒಯು/ಆಕ್ಸಿಜನ್ ಹೊಂದಿದ ಹಾಗೂ ಜನರಲ್ ಬೆಡ್‍ಗಳು) ಶೇ 75 ರಷ್ಟು ಹಾಸಿಗೆಗಳನ್ನು ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಕಾಯ್ದಿರಿಸಲು ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಜಿಲ್ಲಾ ಆಸ್ಪತ್ರೆಯಲ್ಲಿರುವ ಹಳೇ ಡಯಾಲಿಸಿಸ್ ವಾರ್ಡ್(ಬಿ) ಅನ್ನು ಬದಲಾಯಿಸಿ 19 ವೆಂಟಿಲೇಟರ್‌ ಇರುವ ಚಿಕ್ಕಮಕ್ಕಳ ತುರ್ತು ಚಿಕಿತ್ಸಾ ನಿಗಾ ಘಟಕ ನಿರ್ಮಿಸುವ ಕಾಮಗಾರಿ ಪೂರ್ಣಗೊಂಡಿದೆ. ಹೆಚ್ಚುವರಿಯಾಗಿ 14 ಹಾಸಿಗೆಯ ಎಚ್.ಡಿ.ಯು ಸಾಮಾನ್ಯ ತೀವ್ರ ನಿಗಾ ಘಟಕವನ್ನು ಸ್ಥಾಪಿಸಲಾಗಿದೆ ಎಂದು ಹೇಳಿದರು.

ಜಿಲ್ಲಾಸ್ಪತ್ರೆಯಲ್ಲಿ ತುರ್ತು ನಿಗಾ ಘಟಕಗಳಿಗೆ ಆಮ್ಲಜನಕ ಸರಾಗವಾಗಿ ಪೂರೈಕೆ ಮಾಡಲು ಪ್ರತ್ಯೇಕ ಆಮ್ಲಜನಕ ಸರಬರಾಜು ಪೈಪ್‍ಲೈನ್ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಸದ್ಯ 642 ಆಕ್ಸಿಜನ್‌ ಕಾನ್ಸಂಟ್ರೇಟರ್‌ಗಳಿದ್ದು,ಜಿಲ್ಲಾ, ತಾಲ್ಲೂಕು ಆಸ್ಪತ್ರೆ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಿಗೆ ಅವಶ್ಯಕತೆಗಳಿಗೆ ತಕ್ಕಂತೆ ಹಂಚಿಕೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಅವಶ್ಯಕತೆ ಬಿದ್ದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೂ ಸಹ ಹಂಚಿಕೆ ಮಾಡಲಾಗುವುದು ಎಂದು ಹೇಳಿದರು.

ಮೂರನೇ ಅಲೆಯನ್ನು ಎದುರಿಸಲು ಅವಶ್ಯಕವಿರುವ ಎನ್-95 ಮಾಸ್ಕ್, ತ್ರೀ ಲೇಯರ್‌ ಮಾಸ್ಕ್, ಸ್ಯಾನಿಟೈಜರ್ ಮತ್ತು ಔಷಧ ಸಾಮಾಗ್ರಿಗಳು ಸಾಕಷ್ಟು ಪ್ರಮಾಣದಲ್ಲಿ ಇದೆ ಎಂದರು.

ಜನರಲ್ ವಾರ್ಡ್‍ಗಳಲ್ಲಿ ಮಕ್ಕಳಿಗೆ ಸೇರಿದಂತೆ 3508 ಬೆಡ್‍ಗಳ ವ್ಯವಸ್ಥೆ ಮಾಡಲಾಗಿದೆ. ಆಕ್ಸಿಜನ್‍ದೊಂದಿಗೆ ಎಚ್‍ಡಿಯು (ಹೈ ಡಿಪೆಂಡೆನ್ಸಿ ಯುನಿಟ್) ಬೆಡ್‍ಗಳನ್ನು ಮಕ್ಕಳಿಗೆ ಸೇರಿದಂತೆ 2025 ಬೆಡ್‍ಗಳ ವ್ಯವಸ್ಥೆ ಮಾಡಲಾಗಿದೆ. ಐಸಿಯು, ಪಿಐಸಿಯು(ಮಕ್ಕಳಿಗೆ), ಎನ್‍ಐಸಿಯು ಸೇರಿದಂತೆ 533 ಬೆಡ್‍ಗಳ ವ್ಯವಸ್ಥೆ ಇದೆ. ಮಕ್ಕಳಿಗೆ ಸೇರಿದಂತೆವೆಂಟಿಲೇಟರ್‌ ಐಸಿಯು 453 ಬೆಡ್‍ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

ಜನರಲ್ ವಾರ್ಡ್‌ಗಳಲ್ಲಿ 3122, ಆಕ್ಸಿಜನ್‍ದೊಂದಿಗೆ ಎಚ್‍ಡಿಯು 1713, ಐಸಿಯು 211 ಹಾಗೂ ವೆಂಟಿಲೇಟರ್‌ಗಳೊಂದಿಗೆ ಐಸಿಯು 400, ಮಕ್ಕಳಿಗೆ 386, ಎನ್‍ಐಸಿಯು 187 ಹಾಗೂ ವೆಂಟಿಲೇಟರ್‌ಗಳೊಂದಿಗೆ ಎನ್‍ಐಸಿಯು 27 ಬೆಡ್‍, 135 ಪಿಐಸಿಯು ಹಾಗೂ ವೆಂಟಿಲೇಟರ್‌ಗಳೊಂದಿಗೆ ಪಿಐಸಿಯು 26 ಬೆಡ್‍ಗಳ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಚಡಚಣ, ತಡವಲಗಾ, ಆಲಮೇಲ, ಮೋರಟಗಿ, ಕಲಕೇರಿ, ತಾಳಿಕೋಟಿ, ನಾಲತವಾಡ, ಕಾಳಗಿ, ನಿಡಗುಂದಿ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಜನರೇಟರ್ ಅಳವಡಿಸಲಾಗಿದೆ ಎಂದರು.

ವಿಜಯಪುರ ಜಿಲ್ಲಾಸ್ಪತ್ರೆ, ಬಸವನ ಬಾಗೇವಾಡಿ, ಸಿಂದಗಿ, ಮುದ್ದೇಬಿಹಾಳ, ಇಂಡಿ ತಾಲೂಕು ಆಸ್ಪತ್ರೆಗಳಲ್ಲಿಯೂ ಜನರೇಟರ್ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ 1000 ಎಲ್‍ಪಿಎಂ ಸಾಮರ್ಥ್ಯದ ಆಕ್ಸಿಜನ್ ಪ್ಲಾಂಟ್ ವ್ಯವಸ್ಥೆ ಮಾಡಲಾಗಿದೆ. ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆಯಲ್ಲಿ 500, ಬಸವನ ಬಾಗೇವಾಡಿ ಸರ್ಕಾರಿ ಆಸ್ಪತ್ರೆಯಲ್ಲಿ 500, ಇಂಡಿ ಸರ್ಕಾರಿ ಆಸ್ಪತ್ರೆಯಲ್ಲಿ 500, ಚಡಚಣ ಸಮುದಾಯ ಆರೋಗ್ಯ ಕೇಂದ್ರದಲ್ಲಿ 280 ಎಲ್‍ಪಿಎಂ ಸಾಮರ್ಥ್ಯದ ಆಕ್ಸಿಜನ್ ಪ್ಲಾಂಟ್ ವ್ಯವಸ್ಥೆ ಮಾಡಲಾಗಿದೆ ಎಂದರು.

ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ 960, ಸಿಂದಗಿ ಸರ್ಕಾರಿ ಆಸ್ಪತ್ರೆಯಲ್ಲಿ 500 ಎಲ್‍ಪಿಎಂಸಾಮರ್ಥ್ಯದ ಆಕ್ಸಿಜನ್ ಪ್ಲಾಂಟ್ ಅಳವಡಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಅವರು ತಿಳಿಸಿದ್ದಾರೆ.

ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ ಸ್ಥಾಪಿಸಲಾಗಿರುವ 1000 ಎಲ್‍ಪಿಎಂ ಸಾಮರ್ಥ್ಯದ ಆಕ್ಸಿಜನ್ ಪ್ಲಾಂಟ್‍ನಲ್ಲಿ ತಾಂತ್ರಿಕ ತೊಂದರೆ ಉದ್ಭವಿಸಿದ್ದು, ಇದನ್ನು ಕೂಡಲೇ ಪರಿಹರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

***

ಕೋವಿಡ್‌ ಮೂರನೇ ಅಲೆಯ ಬಗ್ಗೆ ಜಿಲ್ಲೆಯ ಜನರು ಭಯಪಡುವ ಅಗತ್ಯವಿಲ್ಲ. ಕೋವಿಡ್‌ ಸೋಂಕು ತಡೆಗೆ ಎಲ್ಲರೂ ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು

–ಪಿ.ಸುನೀಲ್‌ಕುಮಾರ್‌,ಜಿಲ್ಲಾಧಿಕಾರಿ, ವಿಜಯಪುರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT