ವಿಜಯಪುರ: ಒಕ್ಕಲುತನದ ಬಗ್ಗೆ ಹಸಿವು ಬೇಕು. ಹಸಿವು ಇದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ ಎಂದು ಕೃಷಿ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕೃಷಿ ಇಲಾಖೆ, ಕೃಷಿ ವಿಶ್ವವಿದ್ಯಾಲಯ ಹಾಗೂ ಜಿಲ್ಲಾ ಕೃಷಿಕ ಸಮಾಜದ ಸಹಯೋಗದಲ್ಲಿ ಗುರುವಾರ ಕೃಷಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ನಡೆದ ‘ಪ್ರತಿ ಎಕರೆಗೆ 100 ಟನ್ ಕಬ್ಬು ಬೆಳೆಯುವುದು ಹೇಗೆ?’ ಎಂಬ ವಿಚಾರ ಸಂಕಿರಣವನ್ನು ಉದ್ದೇಶಿಸಿ ಮಾತನಾಡಿದರು.

‘ಮಣ್ಣು ರೈತನ ಕಣ್ಣಿನಂತಿದ್ದು, ಅದರ ಫಲವತ್ತತೆ ಕಾಪಾಡುವುದು ಅತ್ಯಂತ ಮುಖ್ಯ, ಮಣ್ಣಿನ ಪೋಷಕಾಂಶಗಳ ಪ್ರಮಾಣದ ಆಧಾರದಲ್ಲಿ ಕಬ್ಬಿನ ಸಾಲುಗಳ ಅಂತರ ನಿಗದಿ ಮಾಡಬೇಕು. ಕಬ್ಬಿಗೆ ಅಗತ್ಯವಿರುವಷ್ಟು ನೀರು ಪೂರೈಸುವುದು ಇಳುವರಿಗೆ ಪ್ರಮುಖವಾಗಿದ್ದು, ಹನಿ ನೀರಾವರಿ ಪದ್ಧತಿಯನ್ನು ಅಳವಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಕಬ್ಬು ಬೆಳೆಗಾರರು ಎದುರಿಸುತ್ತಿರುವ ನಾಲ್ಕು ಪ್ರಮುಖ ಸಮಸ್ಯೆಗಳಾದ ಮಣ್ಣಿನ ಲವಣಾಂಶ ಹೆಚ್ಚಳ ಹಾಗೂ ನೀರು ನಿಲ್ಲುವಿಕೆ, ಬಿಳಿ ಕಸ (ಉರಮಲ್ಲಿಗೆ) ಕಳೆ, ಗೊಣ್ಣೆ ಹುಳು ಕೀಟದ ಹಾನಿ ಮತ್ತು ಕಾಡಿಗೆ ರೋಗಗಳ ಬಗ್ಗೆ ತಜ್ಞರು ಎಚ್ಚರಿಕೆ ನೀಡಿದರು. ಈ ಸಮಸ್ಯೆಗಳನ್ನು ಆರಂಭಿಕ ಹಂತದಲ್ಲೇ ಗುರುತಿಸಿ ಕ್ರಮ ಕೈಗೊಳ್ಳುವುದು ಅಗತ್ಯವೆಂದರು.

ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲ್ಲೂಕಿನ ಕಲ್ಲೋಳಿ ಗ್ರಾಮದ ಪ್ರಗತಿಪರ ರೈತ ಬಾಳಪ್ಪ ಬೆಳಕೋಡ, ಇಂಡಿ ತಾಲ್ಲೂಕಿನ ಶ್ರೀಮಂತ ಇಂಡಿ ಹಾಗೂ ಗೋಳಸಂಗಿಯ ನಾರಾಯಣ ಸಾಲುಂಕೆ ತಮ್ಮ ಅನುಭವ ಹಂಚಿಕೊಂಡರು. ಕೃಷಿ ಮಹಾವಿದ್ಯಾಲಯದ ಮುಖ್ಯ ಕೀಟ ತಜ್ಞ ಎ.ಪಿ.ಬಿರಾದಾರ, ಸಂಕೇಶ್ವರದ ಕೃಷಿ ಸಂಶೋಧನಾ ಕೇಂದ್ರದ ಮುಖ್ಯ ವಿಜ್ಞಾನಿ ಡಾ. ಎಸ್.ಎಸ್.ನೂಲಿ ಮಾತನಾಡಿದರು.

ಕಾರ್ಯಾಗಾರದಲ್ಲಿ ಉಪ ಕೃಷಿ ನಿರ್ದೇಶಕ ಶರಣಗೌಡ ಪಾಟೀಲ, ಚಂದ್ರಕಾಂತ ಪವಾರ, ವಿಜಯಪುರದ ಸಹಾಯಕ ಕೃಷಿ ನಿರ್ದೇಶಕ ಮಂಜುನಾಥ ಜಾನಮಟ್ಟಿ, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಶಿವನಗೌಡ ಬಿರಾದಾರ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-26-1397966289

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.