ವಿಜಯಪುರ: ವಿಜಯಪುರ ವಿಮಾನ ನಿಲ್ದಾಣ ಕಾರ್ಯಾರಂಭಕ್ಕೆ ಅಡಚಣೆಯಾಗಿದ್ದ ಪರಿಸರ ಸಂಬಂಧಿ ಪ್ರಕರಣದ ವಿಚಾರಣೆ ಸುಪ್ರೀಂಕೋರ್ಟಿನಲ್ಲಿ ಮುಗಿದಿದ್ದು, ತೀರ್ಪಿನ ಪ್ರಕಟಣೆ ಮಾತ್ರ ಬಾಕಿ ಇದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಸುಪ್ರೀಂಕೋರ್ಟ್ನಿಂದ ಸಕಾರಾತ್ಮಕ ತೀರ್ಪು ಹೊರಬಂದಲ್ಲಿ ತಕ್ಷಣವೇ ವಿಜಯಪುರ ವಿಮಾನ ನಿಲ್ದಾಣದಿಂದ ವಿಮಾನ ಸೇವೆ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.

ವಿಮಾನ ನಿಲ್ದಾಣದ ಕಾಮಗಾರಿ ಪೂರ್ಣಗೊಂಡಿದ್ದು, ಕಾರ್ಯಾರಂಭಕ್ಕೆ ಅನುಮತಿ ನೀಡುವಂತೆ ಕೋರಿ ನಾಗರಿಕ ವಿಮಾನಯಾನ ಮಹಾನಿ ರ್ದೇಶನಾಲಯಕ್ಕೂ ಇತ್ತೀಚೆಗೆ ಅರ್ಜಿ ಸಲ್ಲಿಸಲಾಗಿದೆ. ಇದರ ಜತೆಗೆ ಸ್ವತಃ ನಾನೇ ಕೇಂದ್ರ ವಿಮಾನಯಾನ ಸಚಿವ ರಾಮಮೋಹನ ನಾಯ್ಡು ಮತ್ತು ಪರಿಸರ ಸಚಿವ ಭೂಪೇಂದ್ರ ಯಾದವ್ ಅವರನ್ನು ಖುದ್ದು ಭೇಟಿ ಮಾಡಿ ಮನವಿ ಸಲ್ಲಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.

2021-22ರಲ್ಲಿ ಯೋಜನೆ ಆರಂಭವಾದಾಗ ಕೇಂದ್ರ ಸರ್ಕಾರದ ಪರಿಸರ ಮತ್ತು ಹವಾಮಾನ ಬದಲಾವಣೆ ಇಲಾಖೆಯಿಂದ ಅನುಮತಿ ತೆಗೆದುಕೊಂಡಿರಲಿಲ್ಲ. ನಮ್ಮ ಸರ್ಕಾರ ಬಂದ ಮೇಲಷ್ಟೆ ಈ ಅನುಮತಿ ಪಡೆದುಕೊಳ್ಳುವ ಪ್ರಕ್ರಿಯೆ ಪ್ರಾರಂಭಿಸಿದ್ದೇವೆ ಎಂದು ತಿಳಿಸಿದ್ದಾರೆ.

ಏತನ್ಮಧ್ಯೆ ಯೋಜನೆಗಳ ಆರಂಭಕ್ಕೂ ಮುನ್ನ ಪರಿಸರ ಸಂಬಂಧಿ ಅನುಮತಿ ಪಡೆಯದ ದೇಶದ ವಿವಿಧ ಯೋಜನೆಗಳ ಸ್ಥಗಿತಕ್ಕೆ ಆಗ್ರಹಿಸಿ ಚೆನ್ನೈನ ವನಶಕ್ತಿ ಸಂಸ್ಥೆ ಸುಪ್ರೀಂಕೋರ್ಟ್ ಮೆಟ್ಟಿಲೇರಿತು. ವಿಚಾರಣೆ ನಡೆಸಿದ ನಂತರ ಇಂತಹ ಯೋಜನೆಗಳ ಆರಂಭಕ್ಕೆ ತಡೆ ನೀಡಿದ್ದಲ್ಲದೇ, ಅವುಗಳನ್ನು ರದ್ದು ಮಾಡಲು ಸೂಚಿಸಿ ಆದೇಶ ಹೊರಡಿಸಿತು ಎಂದು ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್ ಆದೇಶವು ನೇರವಾಗಿ ವಿಜಯಪುರ ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದ್ದಲ್ಲದಿದ್ದರೂ ಪರಿಸರ ಅನುಮತಿಗೆ ಅರ್ಜಿ ಸಲ್ಲಿಸಿದಾಗ ಸುಪ್ರೀಂ ಕೋರ್ಟ್ ಆದೇಶ ಮುಂದಿಟ್ಟು, ಕೇಂದ್ರ ಪರಿಸರ ಇಲಾಖೆ ಒಪ್ಪಿಗೆ ನೀಡಲಿಲ್ಲ. ಆ ಸಂದರ್ಭದಲ್ಲಿ ಸುಪ್ರೀಂಕೋರ್ಟ್ ಹಿರಿಯ ವಕೀಲರಾದ ಕಪಿಲ್ ಸಿಬಲ್, ದೇವದತ್ ಕಾಮತ್, ಭಾರತದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಹೆಚ್ಚುವರಿ ಅಡ್ವೊಕೇಟ್ ಜನರಲ್ ನಿಶಾಂತ್ ಪಾಟೀಲ ಅವರಂತಹ ನುರಿತರನ್ನು ಸೇರಿಸಿಕೊಂಡು ಸಮರ್ಥವಾಗಿ ವಾದ ಮಾಡಿಸಿದ ನಂತರ, ಯೋಜನೆ ರದ್ದು ಆದೇಶವನ್ನು ಸುಪ್ರೀಂಕೋರ್ಟ್ ಮರು ಪರಿಶೀಲಿಸಿ, ಈ ರೀತಿಯ ಸಮಸ್ಯೆ ಎದುರಿಸುತ್ತಿರುವ ದೇಶದ ಎಲ್ಲ ಯೋಜನೆಗಳ ಪ್ರವರ್ತಕರು, ಮಾಲೀಕ ಸಂಸ್ಥೆಗಳ ವಾದವನ್ನು ಆಲಿಸಿತು. ಇದರಲ್ಲಿ ವಿವಿಧ ಸರ್ಕಾರಿ ಯೋಜನೆಗಳು ಕೂಡ ಇತ್ತು. ಸದ್ಯ ತೀರ್ಪು ಕಾಯ್ದಿರಿಸಿದ್ದು, ನ್ಯಾಯಾಲಯ ನೀಡುವ ಆದೇಶದ ಪ್ರಕಾರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ವಿವರಿಸಿದ್ದಾರೆ.

ವಿಮಾನ ಸಂಸ್ಥೆಗಳ ಸಭೆ

ವಿಜಯಪುರವನ್ನು ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ವಿವಿಧ ನಗರಗಳಿಗೆ ಸಂಪರ್ಕ ಕಲ್ಪಿಸಲು ವಿಮಾನ ಸೇವೆ ಒದಗಿಸುವಂತೆ ಕೋರಿ ಅನೇಕ ವಿಮಾನಯಾನ ಸಂಸ್ಥೆಗಳ ಜಿತೆಗೆ ಎರಡು ಸುತ್ತಿನ ಸಭೆ ನಡೆಸಲಾಗಿದೆ. ವಿಮಾನಯಾನ ಸಂಸ್ಥೆಗಳು ಸಕಾರಾತ್ಮಕವಾಗಿ ಸ್ಪಂದಿಸಿವೆ ಎಂದು ಸಚಿವ ಎಂ.ಬಿ.ಹಾಟೀಲ ವಿವರಿಸಿದ್ದಾರೆ.

ವಿಜಯಪುರ ವಿಮಾನ ನಿಲ್ದಾಣ ಆರಂಭವಾದರೆ ಕಿತ್ತೂರು ಕರ್ನಾಟಕದ ಹಲವು ಜಿಲ್ಲೆಗಳ ಜೊತೆಗೆ ನೆರೆಯ ಮಹಾರಾಷ್ಟ್ರದ 2-3 ಜಿಲ್ಲೆಗಳಿಗೂ ಅನುಕೂಲವಾಗಲಿದೆ ಎಂದು ಹಾಟೀಲ ಅಭಿಪ್ರಾಯ ಪಟ್ಟಿದ್ದಾರೆ.

ಹೆಚ್ಚುವರಿ ₹220 ಕೋಟಿ ಬಿಡುಗಡೆ

ವಿಜಯಪುರ ವಿಮಾನ ನಿಲ್ದಾಣ ಯೋಜನೆ ಆರಂಭವಾದಾಗ ಹಲವು ಕೊರತೆಗಳಿದ್ದವು. ನಮ್ಮ ಸರ್ಕಾರ ಬಂದ ಮೇಲೆ ಸಂಪರ್ಕ ರಸ್ತೆ ಅಭಿವೃದ್ಧಿಗೆ ₹ 60 ಕೋಟಿ, ಅಗ್ನಿಶಾಮಕ ವಾಹನಗಳಿಗೆ ₹25 ಕೋಟಿ ಮತ್ತು ವಿಮಾನಗಳ ನೈಟ್ ಲ್ಯಾಂಡಿಂಗ್ ವ್ಯವಸ್ಥೆಗೆ ₹ 60 ಕೋಟಿ ಸೇರಿದಂತೆ ಹೆಚ್ಚುವರಿಯಾಗಿ ₹ 220 ಕೋಟಿ ಬಿಡುಗಡೆ ಮಾಡಲಾಗಿದೆ. ಈಗ ಇಲ್ಲಿಂದ ಯಾವುದೇ ಬಗೆಯ ಬೃಹತ್ ವಿಮಾನಗಳ ಹಾರಾಟಕ್ಕೆ ಬೇಕಾದ ಸೌಕರ್ಯಗಳಿದ್ದು, ಹೆಚ್ಚು ಅನುಕೂಲಕಾರಿಯಾಗಿದೆ ಎಂದು ಸಚಿವ ಎಂ.ಬಿ.ಪಾಟೀಲ ವಿವರಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260404-26-1558222367

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.