ಸಿಂದಗಿ: ಸಿಂದಗಿ ವಿಧಾನಸಭಾ ಮತಕ್ಷೇತ್ರದ ಆಲಮೇಲ ಪಟ್ಟಣದಲ್ಲಿ ₹ 20 ಲಕ್ಷ ವೆಚ್ಚದಲ್ಲಿ ಅಂಗವಿಕಲರ ಭವನ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.

ನಗರದ ತಾಲ್ಲೂಕು ಪಂಚಾಯಿತಿ ಕಾರ್ಯಾಲಯದ ಆವರಣದಲ್ಲಿ ಸೋಮವಾರ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಡಿ 2025-26ನೇ ಸಾಲಿನ ಅನಿರ್ಬಂಧಿತ ಅನುದಾನದಡಿ ಅಂಗವಿಕಲರಿಗಾಗಿ 11 ಇಂಧನ ಚಾಲಿತ ತ್ರಿಚಕ್ರ ಸ್ಕೂಟರ್ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಅಂಗವಿಕರಿಗಾಗಿ ಸರ್ಕಾರ ಅತ್ಯಂತ ಬದ್ಧತೆ, ಪ್ರಾಮಾಣಿಕತೆಯಿಂದ ಅವರಿಗೆ ದೊರಕಬೇಕಾದ ಎಲ್ಲ ಸೌಲಭ್ಯಗಳನ್ನು ತಲುಪಿಸಲಾಗುತ್ತಿದೆ. ನನ್ನ ಮೂರು ವರ್ಷದ ಶಾಸಕ ಅವಧಿಯಲ್ಲಿ ಅಂಗವಿಕಲರಿಗಾಗಿ ನೂರಾರು ತ್ರಿಚಕ್ರ ವಾಹನಗಳನ್ನು ವಿತರಣೆ ಮಾಡಲಾಗಿದೆ. ಅವರ ಕುಂದುಕೊರತೆಗಳನ್ನು ಸದಾ ಆಲಿಸುತ್ತ ಸ್ಪಂದಿಸುತ್ತಿರುವೆ ಎಂದರು.

ಸಿಂದಗಿ ಕ್ಷೇತ್ರದ ಗಬಸಾವಳಗಿ, ಯರಗಲ್ ಬಿ.ಕೆ, ಖೈನೂರ, ಕೊಕಟನೂರ, ಸಿಂದಗಿ, ಯಂಕಂಚಿ, ಯರಗಲ್ ಬಿ.ಕೆ, ಕನ್ನೊಳ್ಳಿ, ಸಿಂದಗಿ, ಆಹೇರಿ, ಕೊಕಟನೂರ ಹೀಗೆ ವಿವಿಧ ಗ್ರಾಮಗಳಲ್ಲಿನ 11 ಜನ ಅಂಗವಿಕಲ ಫಲಾನುಭವಿಗಳಿಗೆ ಇಂಧನ ಚಾಲಿತ ತ್ರಿಚಕ್ರ ವಾಹನ ಈಗ ವಿತರಣೆ ಮಾಡಲಾಗಿದೆ. ಇನ್ನು ಕೆಲವೇ ದಿನಗಳಲ್ಲಿ ಆಲಮೇಲ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿನ ಆರುಜನ ಅಂಗವಿಕಲರಿಗೆ ಇಂಧನ ಚಾಲಿತ ತ್ರಿಚಕ್ರ ವಾಹನ ವಿತರಣೆ ಮಾಡಲಾಗುವುದು ಎಂದು ತಿಳಿಸಿದರು.

ತಾಲ್ಲೂಕು ಪಂಚಾಯಿತಿ ಇಒ ರಾಮು ಅಗ್ನಿ, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಮಲ್ಲಣ್ಣ ಸಾಲಿ, ಜಿಲ್ಲಾ ಕೆಡಿಪಿ ದಸ್ಯ ನೂರಅಹ್ಮದ ಅತ್ತಾರ, ಜಿಲ್ಲಾ ಪಂಚಾಯಿತಿ ಕೆಡಿಪಿ ಸದಸ್ಯ ಸುರೇಶ ಚೌಧರಿ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ನೂತನ ಅಧ್ಯಕ್ಷ ಸಂತೋಷ ಸಾಲಿ, ಸುನಂದಾ ಯಂಪುರೆ, ಶಿವಾನಂದ ಹಡಪದ, ಮಹಮ್ಮದ ರಜತ ತಾಂಬೆ, ನಿಂಗಣ್ಣ ಬುಳ್ಳಾ, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸುರೇಶ ಪೂಜಾರಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-26-420106634

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.