ವಿಜಯಪುರ: ‘ವಿಧಾನಸೌಧದಲ್ಲಿ ಶಾಸಕರು ಆಲಮಟ್ಟಿ ಅಣೆಕಟ್ಟೆ ಎತ್ತರ ಮಾಡಬೇಕೆಂದು ಮಾತನಾಡುತ್ತಾರೆ ಆದರೆ ಶಾಸಕರ ವೇತನ ಮಾತ್ರ ಹೆಚ್ಚಾಗುತ್ತಿದೆ ಹೊರತು ಆಲಮಟ್ಟಿ ಆಣೆಕಟ್ಟು ಎತ್ತರ ಆಗುತ್ತಿಲ್ಲ’ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಗೌರವ ಅಧ್ಯಕ್ಷ ಶಶಿಕಾಂತ ಗುರುಜಿ ಕಿಡಿಕಾರಿದರು.

ನಗರದ ದರ್ಬಾರ ಮೈದಾನದಲ್ಲಿ ಶುಕ್ರವಾರ ನಡೆದ ಆಲಮಟ್ಟಿ ಜಲಾಶಯದ ಎತ್ತರವನ್ನು 524.256 ಮೀಟರ್ಗೆ ಏರಿಸುವಂತೆ ಆಗ್ರಹಿಸಲು ರಾಜ್ಯಮಟ್ಟದ ಬೃಹತ್ ಹೋರಾಟ ಹಾಗೂ ರಾಜ್ಯ ಮಟ್ಟದ 4ನೇ ಬೃಹತ್ ರೈತ ಜಾಗೃತಿ ಸಮಾವೇಶಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಇಡೀ ರಾಜ್ಯ ಹಾಳಾಗುತ್ತಿದೆ. ಗ್ಯಾರಂಟಿ ಯೋಜನೆಯನ್ನು ಸರ್ಕಾರ ಬಂದ್ ಮಾಡಬೇಕು. ಗ್ಯಾರಂಟಿ ಯೋಜನೆಯ ಬದಲಿಗೆ ರೈತರ ಸಾಲ ಮನ್ನಾ ಮಾಡಬೇಕು ಮತ್ತು ರಾಜ್ಯದಲ್ಲಿರುವ ಬಾರ್ಗಳನ್ನು ಬಂದ್ ಮಾಡಬೇಕು’ ಎಂದರು.

‘ರಾಜ್ಯದಲ್ಲಿ ಜಾತಿ ಸಮೀಕ್ಷೆ ಮಾಡುವ ಬದಲು ರೈತರ ಆತ್ಮಹತ್ಯೆ, ಹೆಚ್ಚುತ್ತಿರುವ ವೃದ್ಧಾಶ್ರಮಗಳ ಕುರಿತು ಇಲ್ಲವೇ ಚುನಾವಣೆಯಲ್ಲಿ ಗೆದ್ದು ಶಾಸಕರಾಗುತ್ತಿದ್ದಂತೆ ಅವರ ಆಸ್ತಿ ಎಷ್ಟು ಪಟ್ಟು ಹೆಚ್ಚಾಗಿದೆ ಎನ್ನುವ ಬಗ್ಗೆ ಸಮೀಕ್ಷೆ ಮಾಡಲಿ. ಹೆಚ್ಚುವರಿ ಬಂದ ಆ ಹಣವನ್ನು ಸಿಎಂ ಖಾತೆಗೆ ತೆಗೆದುಕೊಂಡು ಅದನ್ನು ರೈತರಿಗೆ ಹಂಚಿಕೆ ಮಾಡಲಿ’ ಎಂದು ಹೇಳಿದರು.

ಸಂಘದ ರಾಜ್ಯ ಘಟಕದ ಅಧ್ಯಕ್ಷ ಚೂನಪ್ಪ ಪೂಜಾರಿ ಮಾತನಾಡಿ, ‘ಸರ್ಕಾರಗಳು ಕಳೆದ 79 ವರ್ಷಗಳಿಂದ ರೈತರ ಶ್ರಮಕ್ಕೆ ತಕ್ಕ ಬೆಲೆ ಕೊಟ್ಟಿಲ್ಲ, ವಿದ್ಯುತ್, ನೀರು ನೀಡದೆ ಮೋಸ ಮಾಡಿವೆ. ಪ್ರಧಾನಿ, ಸಿಎಂ ಎಲ್ಲರೂ ಸುಳ್ಳು ಹೇಳುತ್ತಿದ್ದಾರೆ. ಸರ್ಕಾರಗಳು ರೈತರ ಸಮಾಧಿ ಮೇಲೆ ರಾಜಕೀಯ ಮಾಡುತ್ತಿವೆ’ ಎಂದು ಕಿಡಿಕಾರಿದರು.

‘ಮೋದಿಯವರು ಪ್ರಧಾನಿಯಾಗಿ 11 ವರ್ಷಗಳಾಗಿವೆ. ಆದರೆ ಇದುವರೆಗೂ ಸ್ವಾಮಿನಾಥನ್ ವರದಿ ಜಾರಿ ಮಾಡಿಲ್ಲ. ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೂ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಏನು ಮಾಡುತ್ತಿವೆ’ ಎಂದು ಪ್ರಶ್ನಿಸಿದರು.

ಇದೇ ಸಂದರ್ಭದಲ್ಲಿ ಸಮಾವೇಶದ ಸ್ಥಳಕ್ಕೆ ಬಂದ ಜಿಲ್ಲಾಧಿಕಾರಿ ಡಾ. ಆನಂದ ಕೆ. ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರಿಗೆ ಸಂಘಟನೆಯ ಮುಖಂಡರು ರೈತಪರ ಬೇಡಿಕೆಗಳ ಮನವಿ ಪತ್ರವನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಮುಗಳಖೋಡ ಮಠದ ಮುರಘರಾಜೇಂದ್ರ ಸ್ವಾಮಿಜಿ, ಹುಕ್ಕೇರಿಯ ಗುರುಶಾಂತೇಶ್ವರ ಸಂಸ್ಥಾನ ಹಿರೇಮಠದ ಚಂದ್ರಶೇಖರ ಸ್ವಾಮಿಜಿ, ಮಾತೋಶ್ರೀ ಸುವರ್ಣತಾಯಿ ಹೊಸಮಠ, ರಾಜ್ಯ ಪ್ರಧಾನ ಕಾರ್ಯದರ್ಶಿ ರಾಹುಲ್ ಕುಬಕಡ್ಡಿ, ರಾಜ್ಯ ಉಪಾಧ್ಯಕ್ಷರಾದ ಕಲ್ಲು ಸೊನ್ನದ, ಶಾಂತಗೌಡ ಪಾಟೀಲ, ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-26-284174096

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.