ವಿಜಯಪುರ: ಬ್ರಿಜೇಶಕುಮಾರ್ ನೇತೃತ್ವದ ಎರಡನೇ ನ್ಯಾಯಾಧೀಕರಣದ ತೀರ್ಪಿನಂತೆ ಆಲಮಟ್ಟಿ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯದ ನೀರಿನ ಮಟ್ಟವನ್ನು 519.60 ಮೀಟರ್ನಿಂದ 524.256 ಮೀಟರ್ಗೆ ಹೆಚ್ಚಿಸಲು ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸುವ ಕುರಿತು ಜೂ.8 ರಂದು ಬೆಳಿಗ್ಗೆ 10.30ಕ್ಕೆ ನಗರದ ಕಂದಗಲ್ ಶ್ರೀ ಹಣಮಂತರಾಯ ರಂಗಮಂದಿರದಲ್ಲಿ ವಿಚಾರ ಸಂಕಿರಣ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಹಾಗೂ ಕರ್ನಾಟಕ ರಾಜ್ಯ ರೈತ ಸಂಘದ ವಿಜಯಪುರ ತಾಲ್ಲೂಕ ಪ್ರಧಾನ ಕಾರ್ಯದರ್ಶಿ ಮಹಾದೇವಪ್ಪ ತೇಲಿ ತಿಳಿಸಿದ್ದಾರೆ.

ಭಾನುವಾರ ಗಗನಮಹಲ್ನಲ್ಲಿ ನಡೆದ ವಿವಿಧ ರೈತಪರ ಸಂಘಟನೆಗಳ ಜಂಟಿ ಸಭೆಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಸಂಶೋಧಕ ಕೃಷ್ಣಾ ಕೊಲ್ಲಾರ ಕುಲಕರ್ಣಿ ಮತ್ತು ಹೋರಾಟಗಾರ ಪಂಚಪ್ಪ ಕಲಬುರ್ಗಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ನೀರಾವರಿ ಸಮಸ್ಯೆಗಳ ಕುರಿತು ಉಪನ್ಯಾಸ ನೀಡಲಿದ್ದಾರೆ ಎಂದರು.

ಜಲಾಶಯ ನಿರ್ಮಾಣದ ವೇಳೆ ಲಕ್ಷಾಂತರ ಎಕರೆ ಜಮೀನು ಹಾಗೂ ಮನೆಗಳನ್ನು ಕಳೆದುಕೊಂಡ ರೈತರಿಗೆ ಸಮರ್ಪಕ ನೀರು ನೀಡದೇ ಹಂಚಿಕೆಯಲ್ಲಿ ಅನ್ಯಾಯವಾಗಿರುವ ಕುರಿತು ಚರ್ಚೆ ನಡೆಯಲಿದೆ. 524.256 ಮೀಟರ್ ಮಟ್ಟಕ್ಕೆ ನೀರು ನಿಲ್ಲಿಸಿದಲ್ಲಿ 22 ಹಳ್ಳಿಗಳು ಮುಳುಗಡೆಯಾಗುವ ಸಾಧ್ಯತೆ ಇದ್ದು, ಸುಮಾರು 1 ಲಕ್ಷ ಎಕರೆ ಜಮೀನು ನೀರಿನಡಿಗೆ ಸೇರುವ ಆತಂಕವಿದೆ. ಇದಕ್ಕೆ ಸಂಬಂಧಿಸಿದ ಪರಿಹಾರ, ಕಾಲುವೆ ನಿರ್ಮಾಣ ಸಂದರ್ಭದಲ್ಲಿ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ಸೇರಿದಂತೆ ವಿವಿಧ ವಿಷಯಗಳನ್ನು ಚರ್ಚಿಸಲಾಗುವುದು ಎಂದು ತಿಳಿಸಿದ್ದಾರೆ.

ಸಭೆಯಲ್ಲಿ ಜಿಲ್ಲಾ ಅಧ್ಯಕ್ಷ ಉಮೇಶ ವಾಲಿಕಾರ, ಸಂಘಟನಾ ಕಾರ್ಯದರ್ಶಿ ಗುರುರಾಜ ಪಡಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜ ಸಿದ್ದಾಪೂರ, ಸೋಮು ಬಿರಾದಾರ, ಸತೀಶ ಕುಳ್ಳಳ್ಳಿ, ಹೊನಕೆರೇಪ್ಪ ತೆಲಗಿ, ವಿಠ್ಠಲ ಬಿರಾದಾರ, ಬಾಲಪ್ಪಗೌಡ ಲಿಂಗದಳ್ಳಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-26-880872629

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.