ಮುದ್ದೇಬಿಹಾಳ: ‘ಹಲವಾರು ವರ್ಷದಿಂದ ಆಲಮಟ್ಟಿ ಜಲಾಶಯ ಎತ್ತರ ಹೆಚ್ಚಿಸಬೇಕೆಂಬ ಬೇಡಿಕೆ ಹಾಗೆ ಉಳಿದಿದ್ದು, 519.60 ಮೀಟರ್ ನಿಂದ 524.256 ಮೀಟರ್ ಎತ್ತರ ಹೆಚ್ಚಿಸುವವರೆಗೆ ಬೃಹತ್ ಪಾದಯಾತ್ರೆ ಮಾಡಬೇಕೆಂದು ನಿರ್ಧಾರ ಮಾಡಲಾಗಿದೆ’ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಘಟಕದ ಅಧ್ಯಕ್ಷ ಚುನ್ನಪ್ಪ ಪೂಜಾರಿ ಹೇಳಿದರು.

ಪಟ್ಟಣದಲ್ಲಿ ಭಾನುವಾರ ಖಾಸಗಿ ಹೋಟೆಲ್ ಸಭಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

‘ಕಬ್ಬು ಬೆಳೆಗಾರರ ಸಮಸ್ಯೆ ಬಹಳ ಇದ್ದು, ಈ ಭಾಗದ ಉಳ್ಳಾಗಡ್ಡಿ ಬೆಳೆಗಾರರ ಸಮಸ್ಯೆ ಇದೆ, ಸ್ವಾಮಿನಾಥನ್ ವರದಿ ಜಾರಿಗೆ ತರಬೇಕು. ಅದರಿಂದ ಎಲ್ಲ ಬೆಳೆಗಳಿಗೆ ಅನುಕೂಲ ಆಗುತ್ತದೆ. ಈ ತಾಲ್ಲೂಕಿನ ನಾಗರಬೆಟ್ಟ ಏತ ನೀರಾವರಿ ಯೋಜನೆ ಏಳು ಎಂಟು ವರ್ಷದಿಂದ ನಿಧಾನಗತಿಯಾಗಿ ನಡೆದಿದೆ. ಆದ್ದರಿಂದ ಹಲವು ರೈತರ ಸಮಸ್ಯೆ ಆಲಿಸಿ ಮೇ 8ರಂದು ವಿಜಯಪುರದಲ್ಲಿ ಬೃಹತ್ ಸಮಾವೇಶ ಆಯೋಜಿಸಿದ್ದೇವೆ. ನಾವು ರಾಜ್ಯ ವ್ಯಾಪ್ತಿಯಲ್ಲಿ ನಮ್ಮ ಸಂಘಟನೆ ಗಟ್ಟಿಗೊಳಿಸುವ ಕೆಲಸ ಮಾಡುತ್ತಿದ್ದೇವೆ. 31 ಜಿಲ್ಲೆಯಲ್ಲಿ ನಮ್ಮ ಸಂಘಟನೆ ಇದೆ. ಈ ಸಮಾವೇಶದಲ್ಲಿ ಸುಮಾರು 1 ಲಕ್ಷ ಜನರು ಸೇರಬೇಕು. ಇದು ಪಕ್ಷಾತೀತವಾದ ಸಮಾವೇಶ’ ಎಂದರು.

ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಮಾತನಾಡಿ, ‘ಯಾವುದೇ ಪಕ್ಷ ಮತ್ತು ರಾಜಕಾರಣಿಯಾಗಲಿ ರೈತರಿಗೆ ಬೆಲೆ ಕೊಡುವುದಿಲ್ಲ. ಆದರೆ, ಎಲ್ಲ ರೈತರು ಒಂದಾಗಿ ಹೋರಾಟ ಮಾಡಿದರೆ ಫಲ ಸಿಗುತ್ತದೆ’ ಎಂದರು.

ರಾಹುಲ್ ಕುಬಕಡ್ಡಿ ರಾಜ್ಯ ಪ್ರದಾನ ಕಾರ್ಯದರ್ಶಿ ಮಾತನಾಡಿ, ‘ರೈತರು ಎಲ್ಲ ಸೇರಿ ಸಮಾವೇಶ ಮಾಡುತ್ತಿದ್ದೇವೆ. ಮಠಾಧೀಶರು ಮುಖಂಡರು ಭಾಗವಹಿಸಲಿದ್ದಾರೆ’ ಎಂದರು.

ರೈತ ಮುಖಂಡರಾದ ಮಹಾಂತಗೌಡ ಎಸ್. ಬಿರಾದಾರ, ಅಪ್ಪುಗೌಡ ಪಾಟೀಲ, ಮುತ್ತು ಹಿರೇಮಠ, ಶಿವನಗೌಡ ಕೇಶಪ್ಪಗೌಡರ, ಈಶ್ವರ ಬಡಿಗೇರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-26-1050743657

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.