ವಿಜಯಪುರ: ‘ದಲಿತ ಸಂಘಟನೆಗಳ ಮಹಾ ಒಕ್ಕೂಟದ ನೇತೃತ್ವದಲ್ಲಿ ಏ.18ರಂದು ಡಾ.ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತ್ಯುತ್ಸವ ಸಂಭ್ರಮದಿಂದ ಆಚರಿಸಲಾಗುವುದು’ ಎಂದು ಭೀಮ ಜ್ಯೋತಿ ಸಂಘಟನೆ ರಾಜ್ಯ ಘಟಕದ ಅಧ್ಯಕ್ಷ ಗೋಪಿ ಚಲವಾದಿ ತಿಳಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ದೇಶಕ್ಕಾಗಿ ಬಾಬಾಸಾಹೇಬರ ಕೊಡುಗೆ ಅಪಾರ. ಅವರ ವಿಚಾರಗಳನ್ನು ಜನರಲ್ಲಿ ಬಿತ್ತರಿಸುವ ಹಿನ್ನೆಲೆಯಲ್ಲಿ ದಲಿತ ಸಂಘಟನೆಗಳ ಮಹಾ ಒಕ್ಕೂಟದಿಂದ ನಗರದ ಜಿ.ಪಂ ಮುಖ್ಯದ್ವಾರ ಎದುರಿರುವ ಡಾ.ಬಿ.ಆರ್. ಅಂಬೇಡ್ಕರ್ ಉದ್ಯಾನವನದಲ್ಲಿ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿದೆ’ ಎಂದು ತಿಳಿಸಿದರು.

‘ಕಾರ್ಯಕ್ರಮವನ್ನು ಸಚಿವ ಶಿವಾನಂದ ಪಾಟೀಲ ಉದ್ಘಾಟಿಸಲಿದ್ದು, ಅಬಕಾರಿ ಸಚಿವ ಆರ್.ಬಿ ತಿಮ್ಮಾಪುರ ಸಸಿಗೆ ನೀರುಣಿಸಲಿದ್ದಾರೆ. ಕೋಳಗೇರಿ ಅಭಿವೃದ್ಧಿ ಮಂಡಿಳಿ ಅಧ್ಯಕ್ಷ ಪ್ರಸಾದ ಅಬ್ಬಯ್ಯ ಅಂಬೇಡ್ಕರವರ ಭಾವಚಿತ್ರಕ್ಕೆ ಪುಸ್ಪಾರ್ಚನೆ ಮಾಡಲಿದ್ದಾರೆ. ಸಾನ್ನಿಧ್ಯವನ್ನು ಬುದ್ಧ ವಿಹಾರದ ಬಂತೆ ಉತ್ತರ ಅವರು ವಹಿಸಲಿದ್ದಾರೆ. ಒಕ್ಕೂಟದ ಅಧ್ಯಕ್ಷ ಪರಶುರಾಮ ಲಂಬು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ, ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ’ ಎಂದು ತಿಳಿಸಿದರು.

ಒಕ್ಕೂಟದ ಅಧ್ಯಕ್ಷ ಪರಶುರಾಮ ಲಂಬು, ರಮೇಶ ಕವಲಗಿ, ಶ್ರೀಧರ, ಪರಶುರಾಮ ಚಲವಾದಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-26-605888767

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.