ವಿಜಯಪುರ: ‘ಮಕ್ಕಳ ಸಮಗ್ರ ಬೆಳವಣಿಗೆಯಲ್ಲಿ ಅಂಗನವಾಡಿ ಕೇಂದ್ರಗಳು ಮಹತ್ವದ ಪಾತ್ರ ವಹಿಸುತ್ತಿವೆ’ ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಇಲಾಖೆ ಹಾಗೂ ಅಜೀಂ ಪ್ರೇಮ್ ಜಿಫೌಂಡೇಷನ್ ಸಹಯೋಗದಲ್ಲಿ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಮಂದಿರದಲ್ಲಿ ಅಂಗನವಾಡಿ ಶಿಕ್ಷಕಿಯರು ಮತ್ತು ಸಹಾಯಕಿಯರಿಗೆ ಹಮ್ಮಿಕೊಂಡಿದ್ದ ‘ಬುನಾದಿ’ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಮಕ್ಕಳ ಆರೋಗ್ಯ, ಶಿಕ್ಷಣ ಮತ್ತು ಉತ್ತಮ ಸಂಸ್ಕಾರಗಳ ಬುನಾದಿ ಬಾಲ್ಯಾವಸ್ಥೆಯಲ್ಲೇ ನಿರ್ಮಾಣವಾಗುತ್ತದೆ. ಹಾಗಾಗಿ ಅಂಗನವಾಡಿ ಶಿಕ್ಷಕಿಯರು ಹಾಗೂ ಸಹಾಯಕಿಯರು ತಮ್ಮ ಜವಾಬ್ದಾರಿಯನ್ನು ನಿಷ್ಠೆಯಿಂದ ನಿರ್ವಹಿಸಬೇಕು’ ಎಂದರು.

‘ಸರ್ಕಾರ ಮಕ್ಕಳ ಹಾಗೂ ಮಹಿಳೆಯರ ಕಲ್ಯಾಣಕ್ಕಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ.ಅಂಗನವಾಡಿ ಶಿಕ್ಷಕಿಯರು ಅಂಗನ ವಾಡಿ ಕೇಂದ್ರಕ್ಕೆ ಸೀಮಿತವಾಗದೆ, ಗ್ರಾಮಮತ್ತು ಸಮುದಾಯ ಮಟ್ಟದಲ್ಲಿಯೂ ಜನರಿಗೆ ಯೋಜನೆಗಳ ಮಾಹಿತಿ ತಲುಪಿಸಬೇಕು. ಅವುಗಳ ಸದುಪಯೋಗ ಪಡೆಯಲು ಪ್ರೇರಣೆ ನೀಡಬೇಕು’ ಎಂದು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಕೆ.ಕೆ. ಚವ್ಹಾಣ, ಕಾರ್ಯಕ್ರಮಾಧಿಕಾರಿನಿರ್ಮಲಾ ಸುರಪುರ, ದೀಪಾಕ್ಷಿ, ಜಾನಕಿ, ಅಜೀಂ ಪ್ರೇಮ್ ಜಿಫೌಂಡೇಷನ್ ಜಿಲ್ಲಾ ಸಂಯೋಜಕ ಹರೀಶ ಕೆ.ಆರ್. ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-26-1056103110

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.