ವಿಜಯಪುರ: ಏ.23ರಿಂದ ಮೇ 22ರ ವರೆಗೆ ಜಿಲ್ಲೆಯಲ್ಲಿ 9ನೇ ಸುತ್ತಿನ ಕಾಲು ಬಾಯಿ ರೋಗದ ಉಚಿತ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಔದ್ರಾಮ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ 2025-26ನೇ ಸಾಲಿನ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮ ಯೋಜನೆಯಡಿ 9ನೇ ಸುತ್ತಿನ ಕಾಲುಬಾಯಿ ಜ್ವರ ರೋಗದ ಲಸಿಕಾ ಕಾರ್ಯಕ್ರಮದ ಜಿಲ್ಲಾ ನಿರ್ವಹಣಾ ಸಮಿತಿ ಸಭೆಯ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಹಮ್ಮಿಕೊಳ್ಳಲಾದ ಅಭಿಯಾನದಲ್ಲಿ ರೈತರು, ಹಾಲು ಉತ್ಪಾದಕರ ಸಂಘಗಳು ಭಾಗವಹಿಸಿ ತಮ್ಮ ಜಾನುವಾರಿಗೆ ಕಾಲು ಬಾಯಿ ರೋಗದ ಲಸಿಕೆ ಹಾಕಿಸುವುದರ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಜಾನುವಾರುಗಳಿಗೆ ಆರೋಗ್ಯ ಸಮಸ್ಯೆ ಉಂಟಾದಲ್ಲಿ 1962 ಪಶು ಸಹಾಯವಾಣಿಗೆ ಕರೆ ಮಾಡಿ ಆಂಬ್ಯುಲೆನ್ಸ್ ಉಚಿತ ಸೇವೆ ಪಡೆದುಕೊಳ್ಳಬಹುದಾಗಿದೆ. ಕಾಲು ಬಾಯಿ ರೋಗವು ಎತ್ತು, ಹೋರಿ, ಹಸು ಹಾಗೂ ಎಮ್ಮೆಗಳಲ್ಲಿ ಉಂಟಾದರೆ ಆರ್ಥಿಕ ನಷ್ಟ ಉಂಟಾಗುತ್ತದೆ. ಅಲ್ಲದೆ ರೋಗದಿಂದ ಗುಣಮುಖವಾದ ಜಾನುವಾರುಗಳಿಗೆ ಗರ್ಭಕಟ್ಟುವಿಕೆಯಲ್ಲಿ ವಿಳಂಬವಾಗುತ್ತದೆ. ಜೊತೆಗೆ ಹಾಲಿನ ಇಳುವರಿ ಕಡಿಮೆಯಾಗುವ ಸಾಧ್ಯತೆಯಿದೆ. 3 ತಿಂಗಳ ಮೇಲ್ಪಟ್ಟ ಎಲ್ಲಾ ಜಾನುವಾರುಗಳಿಗೆ ಲಸಿಕೆ ಹಾಕುವುದು ಅಗತ್ಯವಿದೆ ಎಂದು ಹೇಳಿದರು

ಈ ಕಾಲು ಬಾಯಿ ಲಸಿಕೆಯನ್ನು ವರ್ಷಕ್ಕೆ 2 ಬಾರಿ ಹಾಕಲಾಗುತ್ತದೆ. ಒಂದು ತಿಂಗಳು ನಡೆಯುವ ಈ ಅಭಿಯಾನದಲ್ಲಿ ಲಸಿಕೆದಾರರು ಬೆಳಿಗ್ಗೆ 7 ಗಂಟೆಯಿಂದ 10 ಗಂಟೆವರೆಗೆ ಲಸಿಕೆದಾರರಿಗೆ ಲಸಿಕೆ ಹಾಕುವರು. ಈ ಬಾರಿ ಭಾರತ ಪಶುಧನ್ ಆ್ಯಪ್ನಲ್ಲಿ ಲಸಿಕೆದಾರರು ಲಸಿಕೆ ಹಾಕಿದ ಮಾಹಿತಿಯನ್ನು ಅಪ್ಲೋಡ್ ಮಾಡಲು ಅವಕಾಶ ಇರುತ್ತದೆ. ಈ ಅಭಿಯಾನದಲ್ಲಿ ದಿನಕ್ಕೆ 7000 ಜಾನುವಾರುಗಳಿಗೆ ಹಾಕುವ ಗುರಿ ಹೊಂದಿದ್ದು, ಕಳೆದ ಬಾರಿ ಕಾಲು ಬಾಯಿ ಜ್ವರ ಲಸಿಕಾ ಕಾರ್ಯಕ್ರಮದಲ್ಲಿ ಶೇ100 ರಷ್ಟು ಗುರಿ ಸಾಧನೆ ಮಾಡಲಾಗಿದೆ. ಅಲ್ಲದೆ 1962ರ ಪಶು ಅಂಬುಲೆನ್ಸ್ ಕಾರ್ಯನಿರ್ವಹಿಸುತ್ತಿದೆ ಎಂದರು.

ಪಶುಸಂಗೋಪನಾ ಇಲಾಖೆಯ ಉಪನಿರ್ದೇಶಕ ಡಾ.ರೇವಣಸಿದ್ದಪ್ಪ ಪದರಾ ಮಾತನಾಡಿ, ಜಿಲ್ಲೆಯಲ್ಲಿ 1,32,843 ದನಗಳು, 1,35,773 ಎಮ್ಮೆಗಳು ಒಟ್ಟು 2,68,613 ಜಾನುವಾರುಗಳಿಗೆ ಉಚಿತವಾಗಿ ಲಸಿಕೆ ನೀಡುವ ಗುರಿಯನ್ನು ಹೊಂದಲಾಗಿದೆ. ಜಿಲ್ಲೆಯಲ್ಲಿ ಕಾಲು ಬಾಯಿ ಜ್ವರಕ್ಕೆ ಲಸಿಕೆ ನೀಡುವ ತಂಡಗಳನ್ನು ರಚಿಸಲಾಗಿದೆ ಎಂದು ತಿಳಿಸಿದರು.

ಹೆಚ್ಚಿನ ಮಾಹಿತಿಗಾಗಿ ಸಾರ್ವಜನಿಕರು ಹಾಗೂ ರೈತಾಪಿ ವರ್ಗದವರು ಮೊಬೈಲ್ ಸಂಖ್ಯೆ 8277100200 ಸಂಪರ್ಕಿಸಬಹುದು ಎಂದು ತಿಳಿಸಿದರು.

ಜಿಲ್ಲಾಮಟ್ಟದ ಅಧಿಕಾರಿಗಳು ಮತ್ತು ಪಶುಸಂಗೋಪನಾ ಇಲಾಖೆಯ ಉಪ ನಿರ್ದೇಶಕರು ಮತ್ತು ಮುಖ್ಯ ಪಶುವೈದ್ಯಾಧಿಕಾರಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-26-1477843072

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.