ವಿಜಯಪುರ: ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಡಾ.ಬಾಬು ಜಗಜೀವನ ರಾಂ ಅವರ 119ನೇ ಜನ್ಮದಿನಾಚರಣೆಯನ್ನು ಭಾನುವಾರ ಪುಷ್ಪನಮನ ಸಲ್ಲಿಸಿ ಆಚರಿಸಲಾಯಿತು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಎಸ್. ಲೋಣಿ ಮಾತನಾಡಿ, ‘ಜಗಜೀವನ ರಾಂ ಸ್ವಾತಂತ್ರ್ಯ ಹೋರಾಟಗಾರರಾಗಿ, ಅಸ್ಪೃಶ್ಯತೆ ನಿವಾರಣೆಯ ಮುಂಚೂಣಿ ನಾಯಕರಾಗಿ ಹಾಗೂ ಹಸಿರು ಕ್ರಾಂತಿಯ ಹರಿಕಾರರಾಗಿ ದೇಶಕ್ಕೆ ಅಪಾರ ಸೇವೆ ಸಲ್ಲಿಸಿದ್ದಾರೆ. ಇಂದಿರಾ ಗಾಂಧಿ ಅವರ ಆಡಳಿತದಲ್ಲಿ ಪ್ರಮುಖ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ, ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಶ್ರಮಿಸಿದರು. ಯುವ ನಾಯಕರು ಸೇವಾಭಾವದಿಂದ ಪಕ್ಷದಲ್ಲಿ ಕೆಲಸ ಮಾಡಬೇಕು’ ಎಂದು ಸಲಹೆ ನೀಡಿದರು.

ವಕೀಲ ಕೆ.ಎಫ್. ಅಂಕಲಗಿ ಮಾತನಾಡಿ, ‘ಜಗಜೀವನ ರಾಂ ದೇಶದಲ್ಲಿ ಆಹಾರ ಕೊರತೆಯನ್ನು ನಿವಾರಿಸಲು ಕೃಷಿಗೆ ಉತ್ತೇಜನ ನೀಡಿದ್ದು, ಇದರಿಂದ ಅವರನ್ನು ಹಸಿರು ಕ್ರಾಂತಿಯ ಹರಿಕಾರ ಎಂದು ಕರೆಯಲಾಗುತ್ತದೆ. ಬಾಂಗ್ಲಾದೇಶ ವಿಭಜನೆ ಸಂದರ್ಭದಲ್ಲಿ ರಕ್ಷಣಾ ಮಂತ್ರಿಯಾಗಿ ಅವರ ಸೇವೆ ಶ್ಲಾಘನೀಯವಾಗಿದೆ’ ಎಂದು ಹೇಳಿದರು.

ವಕೀಲೆ ವಿದ್ಯಾವತಿ ಅಂಕಲಗಿ, ಉಸ್ಮಾನ ಪಟೇಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಎಂ. ಮುಲ್ಲಾ, ವಸಂತ ಹೊನಮೋಡೆ, ದೇಸು ಚವ್ಹಾಣ, ಸಂತೋಷ ಬಾಲಗಾವಿ, ಚಂದ್ರಶೇಖರ ಪಾಸೋಡಿ, ಕೃಷ್ಣಾ ಲಮಾಣಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260406-26-1572787427

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.