ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೇ 99.86 ಮತದಾನ; ಸೋಲು–ಗೆಲುವಿನ ಲೆಕ್ಕಾಚಾರ

ವಿಜಯಪುರ–ಬಾಗಲಕೋಟೆ ವಿಧಾನ ಪರಿಷತ್‌ ಚುನಾವಣೆ; ಮತಪೆಟ್ಟಿಗೆ ಸೇರಿದ ಭವಿಷ್ಯ
Last Updated 10 ಡಿಸೆಂಬರ್ 2021, 15:39 IST
ಅಕ್ಷರ ಗಾತ್ರ

ವಿಜಯಪುರ: ವಿಜಯಪುರ–ಬಾಗಲಕೋಟೆ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ನ ದ್ವಿಸದಸ್ಯ ಕ್ಷೇತ್ರಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿವಿಜಯಪುರ ಜಿಲ್ಲೆಯಲ್ಲಿ ಶೇ 99.87 ಹಾಗೂ ಬಾಗಲಕೋಟೆ ಜಿಲ್ಲೆಯಲ್ಲಿ ಶೇ 99.85 ರಷ್ಟು ಸೇರಿದಂತೆ ಒಟ್ಟು ಶೇ 99.86 ರಷ್ಟು ಮತದಾನವಾಗಿದೆ.

ಅವಳಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಒಟ್ಟು 7,363 ಮತದಾರರ ಪೈಕಿ 7,353 ಜನ ತಮ್ಮ ಹಕ್ಕು ಚಲಾಯಿಸಿದ್ದಾರೆ. ಕೇವಲ 10 ಜನ ಮಾತ್ರ ವಿವಿಧ ಕಾರಣದಿಂದ ಮತದಾನ ಪ್ರಕ್ರಿಯೆಯಿಂದ ದೂರ ಉಳಿದಿದ್ದಾರೆ.

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ, ಮುದ್ದೇಬಿಹಾಳ, ಇಂಡಿ, ಸಿಂದಗಿ ಮತ್ತು ಆಲಮೇಲ, ಬಬಲೇಶ್ವರ, ನಿಡಗುಂದಿ, ಕೊಲ್ಹಾರ, ಚಡಚಣ ತಾಲ್ಲೂಕಿನಲ್ಲಿ ಶೇ 100ರಷ್ಟು ಮತದಾನವಾಗಿದೆ.

ಬಾಗಲಕೋಟೆ ಜಿಲ್ಲೆಯಇಳಕಲ್‌, ಬಾದಾಮಿ, ಗುಳೇದಗುಡ್ಡ, ಬಾಗಲಕೋಟೆ ಮತ್ತು ಜಮಖಂಡಿ ತಾಲ್ಲೂಕಿನಲ್ಲಿ ಶೇ 100ರಷ್ಟು ಮತದಾನವಾಗಿದೆ.

ಅವಳಿ ಜಿಲ್ಲೆಯಲ್ಲಿಬಹುತೇಕ ಕಡೆ ಮತದಾನ ಪ್ರಕ್ರಿಯೆಬೆಳಿಗ್ಗೆಯಿಂದ ಮಧ್ಯಾಹ್ನದ ವರೆಗೆ ಮಂದಗತಿಯಲ್ಲಿ ನಡೆದಿತ್ತು. ಮಧ್ಯಾಹ್ನದ ಬಳಿಕ ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳೀಯ ಸಂಸ್ಥೆಗಳ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗಳಿಗೆ ಬಂದು ತಮ್ಮ ಹಕ್ಕು ಚಲಾಯಿಸಿದರು.

ಅವಳಿ ಜಿಲ್ಲೆಯ ಕಾಂಗ್ರೆಸ್‌, ಬಿಜೆಪಿ ಮತ್ತು ಜೆಡಿಎಸ್‌ ಶಾಸಕರು, ಸಂಸದರು, ವಿಧಾನ ಪರಿಷತ್‌ ಸದಸ್ಯರು ಸಹ ಮತ ಚಲಾಯಿಸಿದರು.

ದೇವರ ಹಿಪ್ಪರಗಿ ತಾಲ್ಲೂಕಿನ ಕೋರವಾರ ಮತ್ತು ವಿಜಯಪುರ ತಾಲ್ಲೂಕಿನ ಅರಿಕೇರಿ ಗ್ರಾಮ ಪಂಚಾಯಿತಿ ಸದಸ್ಯರು ಒಟ್ಟಿಗೆ ಮತಗಟ್ಟೆಗೆ ಬಂದು ಮತ ಚಲಾಯಿಸಿರುವುದು ವಿಶೇಷವಾಗಿತ್ತು.

ಸಣ್ಣಪುಟ್ಟ ವಾಗ್ವಾದ, ಗೊಂದಲಗಳನ್ನು ಹೊರತು ಪಡಿಸಿದರೆ ಬಹುತೇಕ ಶಾಂತಿಯುತವಾಗಿ ಮತದಾನ ನಡೆಯಿತು.

ಕೋವಿಡ್‌ ಹಿನ್ನೆಲೆಯಲ್ಲಿ ಪ್ರತಿ ಮತಗಟ್ಟೆಗಳಲ್ಲಿ ಕೈಗೆ ಸ್ಯಾನಿಟೈಜ್‌ ಸಿಂಪಡಿಸಿ, ಥರ್ಮಲ್‌ ಸ್ಕ್ಯಾನಿಂಗ್‌ ಮೂಲಕ ಪರೀಕ್ಷೆ ಮಾಡಿದ ಬಳಿಕಮತದಾರರಿಗೆ ಹಕ್ಕು ಚಲಾವಣೆಗೆ ಅವಕಾಶ ಕಲ್ಪಿಸಲಾಯಿತು.

ಮತಗಟ್ಟೆಗಳ ಬಳಿ ಮತದಾರರಿಗಿಂತ ಮತಗಟ್ಟೆ ಸಿಬ್ಬಂದಿ, ಪೊಲೀಸರ ಸಂಖ್ಯೆಯೇ ಅಧಿಕ ಸಂಖ್ಯೆಯಲ್ಲಿ ಕಂಡುಬಂದರು.

ಬಿಜೆಪಿ ಅಭ್ಯರ್ಥಿ ಪಿ.ಎಚ್.ಪೂಜಾರ, ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಗೌಡ ಪಾಟೀಲ, ಪಕ್ಷೇತರ ಅಭ್ಯರ್ಥಿ ಮಲ್ಲಿಕಾರ್ಜುನ ಲೋಣಿ ಸೇರಿದಂತೆ ಏಳು ಅಭ್ಯರ್ಥಿಗಳ ಏಳುಬೀಳನ್ನು ಮತದಾರರು ನಿರ್ಧರಿಸಿದ್ದು, ಮತಪೆಟ್ಟಿಗೆಯಲ್ಲಿ ಭವಿಷ್ಯ ಅಡಗಿದೆ.

ಸೋಲು ಗೆಲುವಿನ ಲೆಕ್ಕಾಚಾರ:‌ ಬಿಜೆಪಿ ಅಭ್ಯರ್ಥಿ ಪಿ.ಎಚ್.ಪೂಜಾರ, ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಗೌಡ ಪಾಟೀಲ ಮತ್ತು ಪಕ್ಷೇತರ ಅಭ್ಯರ್ಥಿ ಮಲ್ಲಿಕಾರ್ಜುನ ಲೋಣಿ ಅವರು ಅವಳಿ ಜಿಲ್ಲೆಯ ಪ್ರತಿ ಮತಗಟ್ಟೆಯಲ್ಲಿ ಚಲಾವಣೆಯಾಗಿರುವ ಮತದಾನದ ಪ್ರಾಥಮಿಕ ವರದಿಯನ್ನು ತರಿಸಿಕೊಂಡು ವಿಶ್ಲೇಷಣೆ ಮಾಡಿಕೊಂಡಿದ್ದು, ತಮ್ಮದೇ ಗೆಲುವು ಎಂದು ಮೂವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ವಿಜಯಪುರ ನಗರದ ದರಬಾರ್‌ ಶಾಲೆ ಆವರಣದಲ್ಲಿ ಡಿಸೆಂಬರ್ 14 ರಂದು‌ ಮತ ಎಣಿಕೆ ನಡೆಯಲಿದ್ದು, ಯಾರು ವಿಜಯದ ಮಾಲೆ ತೊಡಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT