ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ವಿಜಯಪುರ ಬಂದ್’‌ ಏನಾಗುತ್ತೆ? ಬಲವಂತದ ಬಂದ್‌ಗೆ ಅವಕಾಶವಿಲ್ಲ: ಎಸ್‌ಪಿ

Last Updated 4 ಡಿಸೆಂಬರ್ 2020, 14:14 IST
ಅಕ್ಷರ ಗಾತ್ರ

ವಿಜಯಪುರ: ರಾಜ್ಯ ಸರ್ಕಾರವು ಮರಾಠಾ ಅಭಿವೃದ್ಧಿ ನಿಗಮ ರಚನೆ ಮಾಡಿರುವುದನ್ನು ವಿರೋಧಿಸಿ ಕನ್ನಡ ಪರ ಸಂಘಟನೆಗಳು ಡಿ.5ರಂದು ಕರೆ ನೀಡಿರುವ ಬಂದ್‌ ವಿಜಯಪುರದಲ್ಲಿ ಏನಾಗುತ್ತದೆ ಎಂಬುದು ತೀವ್ರ ಕುತೂಹಲ ಕೆರಳಿಸಿದೆ.

ಈಗಾಗಲೇ ರಾಜ್ಯದ ಇತರೆಡೆಗಿಂತ ವಿಜಯಪುರದಲ್ಲಿ ಬಂದ್‌ ವಿಷಯ ಹೆಚ್ಚು ಕಾವು ಪಡೆದಿದೆ. ಕಾರಣಕನ್ನಡಪರ ಸಂಘಟನೆಗಳು ‌ಕರೆ ನೀಡಿರುವ ಬಂದ್ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು, ವ್ಯಾಪಾರಸ್ಥರು, ಹಿಂದೂಪರ ಸಂಘಟನೆಗಳ ಮುಖಂಡರೊಂದಿಗೆ ಸಭೆ ನಡೆಸಿ,ಬಂದ್‌ ವಿಫಲಗೊಳಿಸುವಂತೆಕರೆ ನೀಡಿದ್ದಾರೆ.

ಅಲ್ಲದೇ, ಕನ್ನಡ ಪರ ಸಂಘಟನೆಗಳ ವಿರುದ್ಧ ಆರೋಪ, ಟೀಕಾ ಪ್ರಹಾರ ನಡೆಸಿದ್ದಾರೆ. ‘ವಿಜಯಪುರದಲ್ಲಿ ಅದೇಗೆ ಬಂದ್‌ ನಡೆಸುತ್ತಾರೆ ನೋಡುತ್ತೇನೆ’ ಎಂದು ಸವಾಲು ಹಾಕಿದ್ದಾರೆ.

ಶಾಸಕ ಸವಾಲನ್ನು ಅಷ್ಟೇ ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ರಕ್ಷಣಾ ವೇದಿಕೆ ಮುಖಂಡರು, ಕಾರ್ಯಕರ್ತರು, ಬಂದ್‌ ಯಶಸ್ವಿಗೊಳಿಸಲು ಪ್ರಯತ್ನ ನಡೆಸಿದ್ದಾರೆ. ಈಗಾಗಲೇ ನಗರದಲ್ಲಿ ವಿವಿಧ ಸಂಘಟನೆಗಳ ಮುಖಂಡರು, ಅಂಗಡಿ, ಮಳಿಗೆಗಳನ್ನು ಭೇಟಿ ಮಾಡಿ, ಬಂದ್ ಯಶಸ್ವಿಗೊಳಿಸುವಂತೆ ಮನವಿ ಮಾಡಿದ್ದಾರೆ. ಬಂದ್‌ ಅಂಗವಾಗಿ ನಗರದಲ್ಲಿ ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ.

ಬಲವಂತಕ್ಕೆ ಅವಕಾಶವಿಲ್ಲ:ನಗರದಲ್ಲಿ ಬಲವಂತವಾಗಿ ಅಂಗಡಿ, ಮಳಿಗೆಗಳನ್ನು ಮುಚ್ಚಿಸುವಂತಿಲ್ಲ. ವಾಹನಗಳ ಸಂಚಾರಕ್ಕೆ ಅಡೆತಡೆ ಉಂಟು ಮಾಡುವಂತಲ್ಲ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅನುಮಪ್‌ ಅಗರವಾಲ್‌ ಎಚ್ಚರಿಕೆ ನೀಡಿದ್ದಾರೆ.

ಜಿಲ್ಲೆಯಲ್ಲಿ ಬಂದ್‌ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಮುಂಜಾಗೃತ ಕ್ರಮವಾಗಿ 139 ಪೊಲೀಸ್‌ ಅಧಿಕಾರಿಗಳು, 671 ಪೊಲೀಸ್‌ ಸಿಬ್ಬಂದಿ ಹಾಗೂ ಮೂರು ಐಆರ್‌ಬಿ ಹಾಗೂ ಏಳು ಡಿಎಆರ್‌ ತುಕುಡಿಗಳನ್ನು ಭದ್ರತೆಗೆ ನಿಯೋಜಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

***

ವಿಜಯಪುರ ಜಿಲ್ಲೆಯಲ್ಲಿ ಒತ್ತಾಯ ಪೂರ್ವಕ ಬಂದ್‌ಗೆ ಅವಕಾಶವಿಲ್ಲ. ವಾಹನ ಸಂಚಾರಕ್ಕೆ ತಡೆ ಮಾಡಿದರೆ ಕಾನೂನು ಕ್ರಮಕೈಗೊಳ್ಳಲಾಗುವುದು

-ಅನುಪಮ್‌ ಅಗರವಾಲ್‌,ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT