ವಿಜಯಪುರ: ‘ಪೆಟ್ರೋಲ್ ಮತ್ತು ಡೀಸೆಲ್ ದರ ಹೊರೆಯಾಗುತ್ತಿರುವ ಈ ದಿನಗಳಲ್ಲಿ ವಿಜಯಪುರದಿಂದ ಬೆಂಗಳೂರು ಮತ್ತು ಮುಂಬೈಗೆ ಹೆಚ್ಚುವರಿ ರೈಲು ಸೇವೆಗಳನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳುವ ಮೂಲಕ ಸಂಸದ ರಮೇಶ ಜಿಗಜಿಣಗಿ ತಮ್ಮ ಶಕ್ತಿ ತೋರಿಸಬೇಕು’ ಎಂದು ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಸವಾಲು ಹಾಕಿದರು.

‘ರಾಜ್ಯದ ಪಂಚ ಗ್ಯಾರಂಟಿ ಯೋಜನೆಗಳು ಜಗತ್ತಿಗೆ ಮಾದರಿಯಾಗಿದ್ದು, ಅವುಗಳನ್ನು ಬಿಜೆಪಿ ಆಡಳಿತದಲ್ಲಿರುವ ಸರ್ಕಾರಗಳೂ ನಕಲು ಮಾಡುತ್ತಿವೆ. ಇಂಥ ಸಂದರ್ಭದಲ್ಲಿ ಸಂಸದರು, ರಾಜ್ಯದ ಯೋಜನೆಗಳ ಬಗ್ಗೆ ಪದೇ ಪದೇ ಟೀಕೆ ಮಾಡುತ್ತಿರುವುದು ಹಾಸ್ಯಾಸ್ಪದ. ಪ್ರಚಾರಕ್ಕಾಗಿ ಹೇಳಿಕೆಗಳನ್ನು ನೀಡುವ ಬದಲು ವಿಜಯಪುರಕ್ಕೆ ವಂದೇ ಭಾರತ ರೈಲು ಸೇವೆಯನ್ನು ಪ್ರಾರಂಭಿಸಲು ಕೇಂದ್ರದ ಮೇಲೆ ಒತ್ತಡ ತರಬೇಕು’ ಎಂದು ಅವರು ಪ್ರಕಟಣೆಯ ಮೂಲಕ ಒತ್ತಾಯಿಸಿದರು.

‘ನಿತ್ಯ ವಿಜಯಪುರ ಜಿಲ್ಲೆಯಿಂದ ಹತ್ತಾರು ಸರ್ಕಾರಿ ಮತ್ತು ಖಾಸಗಿ ಬಸ್ಗಳು ಬೆಂಗಳೂರಿಗೆ ಮತ್ತು ಮುಂಬೈಗೆ ಸಂಚರಿಸುತ್ತವೆ. ಈ ಸಂದರ್ಭದಲ್ಲಿ ವಿಜಯಪುರದಿಂದ ಹೆಚ್ಚುವರಿ ರೈಲುಗಳನ್ನು ಓಡಿಸಬೇಕು. ರೈಲುಗಳು ವಿದ್ಯುತ್ ಶಕ್ತಿಯ ಮೇಲೆ ಸಂಚರಿಸುತ್ತವೆ. ಇದರಿಂದ ಜನತೆಗೆ ಅನುಕೂಲವಾಗಲಿದೆ. ಪರಿಸರಕ್ಕೂ ಪೂರಕವಾಗಲಿದೆ’ ಎಂದು ಆಗ್ರಹಿಸಿದರು.

‘ವಂದೇ ಭಾರತ್ ರೈಲು ಸೇವೆ ಪ್ರಾರಂಭಿಸಬೇಕು ಮತ್ತು ವಿಜಯಪುರ- ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯನ್ನು ಉನ್ನತೀಕರಿಸಬೇಕು. ವಿಜಯಪುರದಿಂದ ಬೆಂಗಳೂರಿಗೆ ಸಂಚರಿಸುವ ರೈಲು ಸಂಚಾರದ ಅವಧಿಯನ್ನು ಕಡಿಮೆ ಮಾಡಬೇಕು ಎಂದು ಪ್ರಧಾನಿ, ರೈಲ್ವೆ ಸಚಿವರು, ಹೆದ್ದಾರಿ ಸಚಿವರಿಗೆ ಪತ್ರ ಬರೆದು ಗಮನ ಸೆಳೆದಿದ್ದೇನೆ. ಕೇಂದ್ರದ ಈ ಯೋಜನೆ ತರಲು ಸಂಸದರು ತಮ್ಮ ಪ್ರಭಾವ ಬಳಸಿಕೊಳ್ಳಬೇಕು’ ಎಂದು ಮನವಿ ಮಾಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-26-1671672280

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.