ವಿಜಯಪುರ: ‘ವಿಶ್ವಮಟ್ಟದ ವೈದ್ಯಕೀಯ ಸೇವೆಗಳನ್ನು ಉತ್ತರ ಕರ್ನಾಟಕ ಭಾಗದ ಜನತೆಗೆ ಒದಗಿಸುವ ಉದ್ದೇಶದಿಂದ ಬಿ.ಎಲ್.ಡಿ.ಇ ಆಸ್ಪತ್ರೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಆಸ್ಪತ್ರೆಗೆ ಅಳವಡಿಸಲಾಗುತ್ತಿದೆ’ ಎಂದು ಸಚಿವ ಎಂ.ಬಿ. ಪಾಟೀಲ ಹೇಳಿದರು.

ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದಲ್ಲಿ ನೂತನವಾಗಿ ಅಳವಡಿಸಲಾಗಿರುವ ಅತ್ಯಾಧುನಿಕ ಲ್ಯಾಪ್ರೊಸ್ಕೋಪಿ ಮತ್ತು ಆರ್ಥ್ರೊಸ್ಕೋಪಿ ಯಂತ್ರಗಳನ್ನು ಶುಕ್ರವಾರ ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು.

‘ಈ ಹೊಸ 3D ಮತ್ತು 4K ಅನುಕೂಲ ಹೊಂದಿದ ವ್ಯವಸ್ಥೆಗಳು ವೈದ್ಯಕೀಯ ಶಿಕ್ಷಣ, ಸಂಶೋಧನೆ ಮತ್ತು ರೋಗಿ ಸೇವೆಯಲ್ಲಿ ಮಹತ್ತರ ಬದಲಾವಣೆ ತರಲಿವೆ’ ಎಂದು ತಿಳಿಸಿದರು.

‘ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಮತ್ತು ವೈದ್ಯಕೀಯ ತಜ್ಞರು, ಈ ತಂತ್ರಜ್ಞಾನದಿಂದ ರೋಗಿಗಳಿಗೆ ಇನ್ನಷ್ಟು ಗುಣಮಟ್ಟದ ಚಿಕಿತ್ಸೆ ಲಭ್ಯವಾಗಲಿದೆ’ ಎಂದು ಅವರು ಹೇಳಿದರು.

ಡೀಮ್ಡ್ ವಿವಿ ಸಮಕುಲಾಧಿಪತಿ ಡಾ. ವೈ.ಎಂ. ಜಯರಾಜ, ಕುಲಪತಿ ಡಾ. ಅರುಣ ಇನಾಮದಾರ, ಕುಲಸಚಿವ ಡಾ. ಆರ್.ವಿ. ಕುಲಕರ್ಣಿ, ಕಾಲೇಜಿನ ಪ್ರಾಚಾರ್ಯೆ ಡಾ. ತೇಜಶ್ವಿನಿ ವಲ್ಲಭ, ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ವಿಜಯಕುಮಾರ ಕಲ್ಯಾಣಪ್ಪಗೋಳ, ಉಪಪ್ರಾಚಾರ್ಯ ಡಾ. ಆನಂದ ಅಂಬಲಿ, ವೈದ್ಯಕೀಯ ಅಧೀಕ್ಷಕ ಡಾ. ಎಸ್.ಎನ್. ಬೆಂಟೂರ್ ಸೇರಿದಂತೆ ವಿಶ್ವವಿದ್ಯಾಲಯದ ಅಧಿಕಾರಿಗಳು, ವಿಭಾಗದ ಮುಖ್ಯಸ್ಥರು ಹಾಗೂ ಅಧ್ಯಾಪಕರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-26-1110059915

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.