ವಿಜಯಪುರ: ‘ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಭವನದ ನೀಲನಕ್ಷೆ ಸಿದ್ಧಗೊಂಡಿದ್ದು, ಭವನ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ‘ಭವನ ನಿರ್ಮಾಣಕ್ಕೆ ಸಂಬಂಧಿಸಿದಂತೆ ಅಗತ್ಯ ಪ್ರಕ್ರಿಯೆ ನೆರವೇರಿಸಲಾಗುವುದು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಿಗೆ ಪ್ರಸ್ತಾವನೆ ಸಲ್ಲಿಸಿ ಅನುಮತಿ ಪಡೆಯಲಾಗುವುದು. ಪ್ರಸ್ತಾವನೆಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಅನುಮತಿ ಪಡೆದು ಸರ್ಕಾರಕ್ಕೆ ಸಲ್ಲಿಸಲಾಗುವುದು’ ಎಂದು ತಿಳಿಸಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಹಾಸಿಂಪೀರ ವಾಲೀಕಾರ ಮಾತನಾಡಿ, ‘2013ರಲ್ಲಿ ವಿಜಯಪುರ ನಗರದಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಉಳಿದ ₹2.25 ಕೋಟಿ ಜಮೆ ಇಡಲಾಗಿತ್ತು. ಈ ಠೇವಣಿ ₹5ದು ಕೋಟಿ ವರೆಗೆ ಆಗಿದೆ. ಇನ್ನುಳಿದ ಹಣ ಜಿಲ್ಲೆಯ ಸಚಿವರು, ಶಾಸಕರು, ವಿ.ಪ ಸದಸ್ಯರು, ಸಂಸದರಿಂದ, ಸರ್ಕಾರದ ಅನುದಾನ ಪಡೆದು ಕನ್ನಡ ಸಾಹಿತ್ಯ ಪರಿಷತ್ತಿನ ಭವನ ನಿರ್ಮಾಣ ಮಾಡುವ ಪ್ರಕ್ರಿಯೆ ನಡೆಯುತ್ತಿದೆ’ ಎಂದು ವಿವರಿಸಿದರು.

ಕಟ್ಟಡ ನೀಲನಕ್ಷೆ ಸಿದ್ಧಪಡಿಸಿದ ವಿಠ್ಠಲ ಟಂಕಸಾಲಿ, ಲೋಕೋಪಯೋಗಿ ಇಲಾಖೆಯ ಮಾಲಿಪಾಟೀಲ, ಭಾರತಿ ಪಾಟೀಲ, ಅಭಿಷೇಕ ಚಕ್ರವರ್ತಿ, ಮೊಹ್ಮದ್ಗೌಸ್ ಹವಾಲ್ದಾರ, ರವಿ ಕಿತ್ತೂರ, ಬಿ.ಎಂ. ಆಜೂರ, ಕಮಲಾ ಮುರಾಳ, ಜಯಶ್ರೀ ಹಿರೇಮಠ, ಶಿಲ್ಪಾ ಭಸ್ಮೆ, ರಾಜೇಶ್ವರಿ ಮೋಪಗಾರ, ಅರ್ಜುನ ಶಿರೂರ, ಶಿವಾನಂದ ಮಂಗಾನವರ, ಶೈಲಾ ಬಳಗಾನೂರ, ಎಂ.ಬಿ. ಮೋಪಗಾರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.