ವಿಜಯಪುರ: ಕರ್ನಾಟಕ ಕಂಡ ಧೀಮಂತ ರಾಜಕೀಯ ಮುತ್ಸದ್ಧಿ ಯಡಿಯೂರಪ್ಪ. ಮುಖ್ಯಮಂತ್ರಿಯಾಗಿ ಭಾಗ್ಯಲಕ್ಷ್ಮಿ ಯೋಜನೆ, ಶಾಲಾ ಮಕ್ಕಳಿಗೆ ಸೈಕಲ್, ರೈತರಿಗಾಗಿ ಪ್ರತ್ಯೇಕ ಕೃಷಿ ಬಜೆಟ್ ಹೀಗೆ ಅಭೂತಪೂರ್ವ ಕೊಡುಗೆ ನೀಡಿದ್ದಾರೆ ಎಂದು ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಹೇಳಿದರು.

ಚಿತ್ರದುರ್ಗದಲ್ಲಿ ಮೇ 9ರಂದು ನಡೆಯಲಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಭಿಮಾ ನೋತ್ಸವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ನಗರ ಮಂಡಲದಿಂದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ವಿಜಯಪುರ ಜಿಲ್ಲೆಗೂ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯಡಿಯೂರಪ್ಪನವರು ಅಜಾತಶತ್ರುವಾಗಿದ್ದು ಎಲ್ಲ ಸಮುದಾಯದ ಜನರನ್ನು ಸಮಾನರಾಗಿ ಕಂಡವರಾಗಿದ್ದಾರೆ. ಅವರ ಅಭಿಮಾನೋತ್ಸವದ ಈ ಕಾರ್ಯಕ್ರಮಕ್ಕೆ ನಾವೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸೋಣ ಎಂದರು.

ಹೋರಾಟಕ್ಕೆ ಇನ್ನೊಂದು ಹೆಸರು ಬಿ.ಎಸ್.ಯಡಿಯೂರಪ್ಪ ಎಂದು ಜಮಖಂಡಿಯ ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ ಹೇಳಿದರು.

ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಬಿಜೆಪಿಯ ಜಿಲ್ಲಾ ಘಟಕದ ಅಧ್ಯಕ್ಷ ಗುರುಲಿಂಗಪ್ಪ ಅಂಗಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಈರಣ್ಣ ರಾವೂರ, ಮಲ್ಲು ಕಲಾದಗಿ, ವಿಜಯ ಜೋಶಿ, ಮುಖಂಡರಾದ ಸುರೇಶ ಬಿರಾದಾರ, ಮಳುಗೌಡ ಪಾಟೀಲ, ಸಂದೀಪ ಪಾಟೀಲ, ಭೀಮಾಶಂಕರ ಹದನೂರ, ಸ್ವಪ್ನಾ ಕಣಮುಚನಾಳ, ಭರತ ಕೋಳಿ, ವಿಜಯ ಜೋಷಿ, ಪಾಪುಸಿಂಗ ರಜಪೂತ, ರಾಜೇಶ ತಾವಸೆ, ಶರಣಬಸಪ್ಪ ಕುಂಬಾರ, ಅಪ್ಪು ಕುಂಬಾರ, ರಾಜು ಬಿರಾದಾರ, ಜಗದೀಶ ಮುಚ್ಚಂಡಿ, ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-26-1679759638

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.