ವಿಜಯಪುರ: ‘ಚಿತ್ರದುರ್ಗದಲ್ಲಿ ಮೇ 9 ರಂದು ನಡೆಯಲಿರುವ ಬಿ.ಎಸ್.ಯಡಿಯೂರಪ್ಪ ಅಭಿಮಾನೋತ್ಸವದಲ್ಲಿ ವಿಜಯಪುರ ಜಿಲ್ಲೆಯಿಂದ 18 ರಿಂದ 20 ಸಾವಿರ ಅಭಿಮಾನಿಗಳು ಭಾಗವಹಿಸಲಿದ್ದಾರೆ’ ಎಂದು ಮಾಜಿ ಶಾಸಕ ಪಿ.ರಾಜೀವ್ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಯಾವ ವಿಷಯಕ್ಕೆ ಹೋರಾಟ ಮಾಡಿದರೂ ಅಧಿಕಾರ ದೊರಕಿದಾಗ ಆ ಹೋರಾಟದ ಆಶಯಗಳನ್ನು ಈಡೇರಿಸುವ ಮೂಲಕ ಧೀಮಂತವಾಗಿ ಆಡಳಿತ ನಡೆಸಿದ ಮಹಾನ್ ನೇತಾರ ಬಿ.ಎಸ್.ಯಡಿಯೂರಪ್ಪ, ಅವರು ನಾಡು ಕಂಡ ಶ್ರೇಷ್ಠ ಹೋರಾಟಗಾರ, ಹೀಗಾಗಿ ಅವರನ್ನು ಹೃದಯಸ್ಪರ್ಶಿಯಾಗಿ ಅಭಿನಂದಿಸುವ ದೃಷ್ಟಿಯಿಂದ ಅಭಿಮಾನಿಗಳೆಲ್ಲರೂ ಸೇರಿ ಬಿ.ಎಸ್.ಯಡಿಯೂರಪ್ಪ ಅವರ ಅಭಿಮಾನೋತ್ಸವ ಹೆಸರಿನಲ್ಲಿ ಚಿತ್ರದುರ್ಗದಲ್ಲಿ ಅರ್ಥಪೂರ್ಣ ಕಾರ್ಯಕ್ರಮ ಸಂಘಟಿಸಲಾಗುತ್ತಿದೆ, ವಿಜಯಪುರ ಜಿಲ್ಲೆಯಿಂದಲೂ ಸಹ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಪಾಲ್ಗೊಂಡು ಕಾರ್ಯಕ್ರಮಕ್ಕೆ ಸಾಕ್ಷಿಯಾಗಬೇಕು’ ಎಂದರು.

‘ಭಾಗ್ಯಲಕ್ಷ್ಮಿ, ಮಕ್ಕಳಿಗೆ ಸೈಕಲ್ ಯೋಜನೆ ಮಹಿಳೆಯರ ಶ್ರೇಯೋಭಿವೃದ್ಧಿಯ ಒಂದು ದಿವ್ಯ ಯೋಜನೆಯಾಗಿದೆ, ಈ ಎಲ್ಲ ಫಲಾನುಭವಿಗಳು, ನಾಡಿನ ಹಲವಾರು ಮಠಾಧೀಶರು, ಯಡಿಯೂರಪ್ಪ ಅವರ ಹೋರಾಟದಲ್ಲಿ ಹೆಜ್ಜೆ ಹಾಕಿದ ಒಡನಾಡಿಗಳು ಎಲ್ಲರೂ ಈ ಅಭಿಮಾನೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ’ ಎಂದರು.

‘ಕೇಂದ್ರ ಗೃಹ ಸಚಿವ ಅಮೀತ್ ಶಾ ಸೇರಿದಂತೆ ಅನೇಕ ರಾಜಕೀಯ ನಾಯಕರು ಭಾಗವಹಿಸಲಿದ್ದಾರೆ, 12 ಲಕ್ಷಕ್ಕೂ ಅಧಿಕ ಜನರಿಗೆ ಊಟದ ವ್ಯವಸ್ಥೆ ಸೇರಿದಂತೆ ವಿವಿಧ ರೀತಿಯ ಸಿದ್ಧತೆಗಳು ಭರದಿಂದ ನಡೆಯುತ್ತಿವೆ’ ಎಂದರು.

ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಮಾತನಾಡಿ, ‘ಕೃಷ್ಣಾ ಮೇಲ್ದಂಡೆ ಬಿ ಸ್ಕೀಂ ಯೋಜನೆ, ಕೆರೆಗಳಿಗೆ ನೀರು ತುಂಬುವ ಯೋಜನೆ, ಚಿಮ್ಮಲಗಿ ಏತ ನೀರಾವರಿಗೆ ಆಡಳಿತಾತ್ಮಕ ಅನುಮೋದನೆ ಹೀಗೆ ಯಡಿಯೂರಪ್ಪನವರು ಜಿಲ್ಲೆಗೆ ನೀಡಿದ ಕೊಡುಗೆ ಅನನ್ಯ, ಕೆಲವರು ಯಡಿಯೂರಪ್ಪ ಅವರ ಕೊಡುಗೆ ಜಿಲ್ಲೆಗೆ ಇಲ್ಲ ಎಂದು ಹೇಳಿಕೊಂಡು ತಿರುಗಾಡುತ್ತಿದ್ದಾರೆ, ಅವರು ಕೊಟ್ಟ ಕೊಡುಗೆ ಯಾವ ಮುಖ್ಯಮಂತ್ರಿಯೂ ನೀಡಿಲ್ಲ’ ಎಂದರು.

ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಎಸ್.ಕೆ.ಬೆಳ್ಳುಬ್ಬಿ, ಮಾಜಿ ಶಾಸಕರಾದ ಸಂಜಯ ಪಾಟೀಲ, ರಮೇಶ ಭೂಸನೂರ, ಮುಖಂಡರಾದ ಗುರುಲಿಂಗಪ್ಪ ಅಂಗಡಿ, ಉಮೇಶ ಕಾರಜೋಳ, ಕಾಸುಗೌಡ ಬಿರಾದಾರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-26-8428370

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.