ವಿಜಯಪುರ: ಇಲ್ಲಿನ ಕೇಂದ್ರ ಬಸ್ ನಿಲ್ದಾಣಕ್ಕೆ ಮೂಲಸೌಕರ್ಯ ಕಲ್ಪಿಸುವುದು ಸೇರಿದಂತೆ ಸಾರ್ವಜನಿಕ ಪರವಾದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದ್ರಾವಿಡ ವಿದ್ಯಾರ್ಥಿ ಪರಿಷತ್ ಜಿಲ್ಲಾ ಘಟಕದ ಪದಾಧಿಕಾರಿಗಳು ಹೆಚ್ಚುವರಿ ಜಿಲ್ಲಾಧಿಕಾರಿ ಔದ್ರಾಮ್ ಅವರಿಗೆ ಮನವಿ ಸಲ್ಲಿಸಿದರು.

ಪರಿಷತ್ ಅಧ್ಯಕ್ಷ ಅಕ್ಷಯಕುಮಾರ ಅಜಮನಿ ಮಾತನಾಡಿ, ‘ಕೇಂದ್ರ ಬಸ್ ನಿಲ್ದಾಣ ಅವ್ಯವಸ್ಥೆಯ ಆಗರವಾಗಿದೆ. ನಗರದ ಪ್ರಮುಖ ಸಾರಿಗೆ ಕೇಂದ್ರವಾಗಿರುವ ರಾಣಿ ಚನ್ನಮ್ಮ ಕೇಂದ್ರ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರು ಪ್ರತಿನಿತ್ಯ ಸಮಸ್ಯೆ ಎದುರಿಸುವಂತಾಗಿದೆ. ಅಕ್ರಮ ಶುಲ್ಕ ವಸೂಲಿ ಹಾಗೂ ಕುಡಿಯುವ ನೀರಿನ ಅಲಭ್ಯತೆ ಸೇರಿದಂತೆ ಸಮಸ್ಯೆಗಳ ಪಟ್ಟಿ ದೊಡ್ಡದಿದೆ’ ಎಂದರು.

‘ನಿಲ್ದಾಣದಲ್ಲಿ ಸಾರ್ವಜನಿಕ ಗ್ರಂಥಾಲಯದ ವ್ಯವಸ್ಥೆ, ಸುರಕ್ಷಿತ ಲಗೇಜ್ ಲಾಕರ್ ವ್ಯವಸ್ಥೆ ಇಲ್ಲ. ಸಾರ್ವಜನಿಕ ಶೌಚಾಲಯಗಳ ನಿರ್ವಹಣೆ ಕಳಪೆಯಾಗಿದ್ದು, ನಿಗದಿಗಿಂತ ಹೆಚ್ಚಿನ ಶುಲ್ಕ ವಸೂಲಿ ಮಾಡಲಾಗುತ್ತಿದೆ. ಜಿಲ್ಲಾಡಳಿತ ತಕ್ಷಣವೇ ಮಧ್ಯಪ್ರವೇಶಿಸಿ ಎಲ್ಲ ಸಮಸ್ಯೆಗಳನ್ನು ಪರಿಹರಿಸಬೇಕು’ ಎಂದು ಆಗ್ರಹಿಸಿದರು.

ಮುಖಂಡರಾದ ಗೌಡಪ್ಪಗೌಡ ಬಡಿಗೇರ್, ಮಂಜುನಾಥ್ ಕವಳೆ, ಹುಲಗಪ್ಪ ಹಂದ್ರಾಳ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-26-901565326

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.