ವಿಜಯಪುರ: ‘ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಿಲ್ದಾಣಗಳಲ್ಲಿನ ಸಾರ್ವಜನಿಕ ಶೌಚಾಲಯಗಳಲ್ಲಿ ಗುತ್ತಿಗೆದಾರರು ನಿಗದಿತ ದರಕ್ಕಿಂತ ಹೆಚ್ಚಿನ ಹಣ ವಸೂಲಿ ಮಾಡುತ್ತಿದ್ದು, ಕೂಡಲೇ ಗುತ್ತಿಗೆದಾರರ ಪರವಾನಗಿ ರದ್ದು ಪಡಿಸಬೇಕು’ ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳು ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.

ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಉಪಾಧ್ಯಕ್ಷ ಬಸವರಾಜ ತಾಳಿಕೋಟಿ ಮಾತನಾಡಿ, ‘ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಿಲ್ದಾಣಗಳಲ್ಲಿನ ಶೌಚಾಲಯಗಳಲ್ಲಿ ಗುತ್ತಿಗೆದಾರರು ಹೆಚ್ಚಿನ ಹಣ ವಸೂಲಿ ಮಾಡುತ್ತಿದ್ದಾರೆ. ಸಂಸ್ಥೆಯ ನಿಯಮಾನುಸಾರ ಶೌಚಕ್ಕೆ ₹2 ಮತ್ತು ಮೂತ್ರಕ್ಕೆ ಉಚಿತವಾಗಿರುತ್ತದೆ ಎಂಬ ಕರಾರು ಇದ್ದರೂ ಸಹ ಗುತ್ತಿಗೆದಾರರು ಶೌಚಕ್ಕೆ ₹10 ಮತ್ತು ಮೂತ್ರಕ್ಕೆ ಮಹಿಳೆಯರಿಂದ ₹10 ಸುಲಿಗೆ ಮಾಡುತ್ತಿದ್ದಾರೆ. ಶೌಚಾಲಯ ಕಟ್ಟಡದ ಮುಂಭಾಗ ದರ ನಾಮಫಲಕ ಅಳವಡಿಸಿಲ್ಲ’ ಎಂದು ಆರೋಪಿಸಿದರು.

ಯಲ್ಲಾಲಿಂಗ ಉಮರಾಣಿ, ಪರಶುರಾಮ ಸಾತಿಹಾಳ, ಶಶಿಕಾಂತ ಹಚಡದ, ಮಹೇಶ, ಮಯೂರ, ಆನಂದ ಕೆ., ಸುಶಾಂತ, ಗಣೇಶ, ಮಂಜುನಾಥ, ಸಂಜೀವ ಕೊಳಲಿ, ಪ್ರಶಾಂತ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-26-830163271

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.