ವಿಜಯಪುರ: ಚಡಚಣ ಪಟ್ಟಣದಿಂದ ಯಾವ ಕಾರಣಕ್ಕೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸ್ಥಳಾಂತರಿಸಬಾರದು ಹಾಗೂ ವಿದ್ಯಾರ್ಥಿ ಪರವಾದ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಸಮಗ್ರ ಕರ್ನಾಟಕ ವಿದ್ಯಾರ್ಥಿ ಅಸೋಸಿಯೇಷನ್ ವಿಜಯಪುರ ಜಿಲ್ಲಾ ಘಟಕದ ಪದಾಧಿಕಾರಿಗಳು ಹೆಚ್ಚುವರಿ ಜಿಲ್ಲಾಧಿಕಾರಿ ಔದ್ರಾಮ್ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.

ಸಂಘಟನೆಯ ಜಿಲ್ಲಾ ಅಧ್ಯಕ್ಷ ಶ್ರೀಶೈಲ ತೇಲಿ ಮಾತನಾಡಿ, ‘2025-26ನೇ ಸಾಲಿನ ಬಜೆಟ್ನಲ್ಲಿ ಕರ್ನಾಟಕ ಸರ್ಕಾರವು ವಿಜಯಪುರ ಜಿಲ್ಲೆಯ ಚಡಚಣದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸ್ಥಾಪಿಸಲು ಅನುಮತಿ ನೀಡಿತ್ತು. ಆದರೆ ಚಡಚಣದ ಕೆಲವು ವ್ಯಕ್ತಿಗಳು ಮತ್ತು ಖಾಸಗಿ ಶಿಕ್ಷಣ ಸಂಸ್ಥೆಯವರು ಸರ್ಕಾರಿ ಪ್ರಥಮ ದರ್ಜೆ ಕಾಲೇಜನ್ನು ಸ್ಥಾಪಿಸಲು ವಿರೋಧ ವ್ಯಕ್ತ ಪಡಿಸುತ್ತಿದ್ದಾರೆ ಮತ್ತು ಸರ್ಕಾರ ಹಾಗೂ ಶಾಸಕರ ಮೇಲೆ ಒತ್ತಡ ಹೇರುತ್ತಿದ್ದಾರೆ’ ಎಂದು ಆರೋಪಿಸಿದರು.

‘ಅಲ್ಲಿರುವ ಖಾಸಗಿ ಶಿಕ್ಷಣ ಸಂಸ್ಥೆಯವರು ತಮಗೆ ತೊಂದರೆ ಆಗುತ್ತದೆ ಎಂಬ ನಂಬಿಕೆಯಿಂದ ಸರ್ಕಾರಿ ಕಾಲೇಜನ್ನು ಸ್ಥಾಪಿಸಲು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಚಡಚಣದಲ್ಲಿ ಸ್ಥಾಪನೆ ಆಗಬೇಕು. ಇದರಿಂದ ಬಡ ಹಾಗೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಅನುಕೂಲವಾಗುತ್ತದೆ’ ಎಂದರು.

ಸಂಘಟನೆಯ ವಿಜಯಪುರ ತಾಲ್ಲೂಕು ಘಟಕದ ಅಧ್ಯಕ್ಷ ಯಮನಪ್ಪ ಬೂದಿಹಾಳ, ಮುತ್ತುರಾಜ ಕೂಡಗಿ, ಸುಮೀತ ನಿರಾಳೆ, ಹರೀಶ ಇಂಗಳೆ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-26-1916332218

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.