ಚಡಚಣ: ‘ಪಟ್ಟಣವೂ ಸೇರಿದಂತೆ ತಾಲ್ಲೂಕಿನ 13 ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲ ಗ್ರಾಮಗಳಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳು ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಕೈಗೊಳ್ಳಬೇಕು’ ಎಂದು ಶಾಸಕ ವಿಠ್ಠಲ ಕಟಕಧೋಂಡ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಎಲ್ಲ ಇಲಾಖೆಗಳ ಟಾಸ್ಕ್ಫೋರ್ಸ್ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

‘ತಾಲ್ಲೂಕಿನ ಎಲ್ಲ ಕಾಲುವೆಗಳಿಗೆ ನೀರು ಹರಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಹಾವಿನಾಳ, ಹತ್ತಳ್ಳಿ, ಬ್ಯಾರೇಜ್ ತುಂಬಿಸಲು ಅಧಿಕಾರಿಗಳು ಕ್ರಮ ವಹಿಸಬೇಕು. ಉಮರಾಣಿ ಬ್ಯಾರೇಜ್ ನೀರನ್ನು 5 ಮೀಟರ್ ವರೆಗೆ ಯಾವಾಗಲೂ ಕಾಯ್ದುಕೊಳ್ಳಬೇಕು. ಈಗ ಭೀಮಾ ನದಿ ನೀರಿನ ಮಟ್ಟ ಕಡಿಮೆಯಾಗಿದೆ, ಕೆಲವೊಂದು ಬಹು ಹಳ್ಳಿ ಕುಡಿಯುವ ನೀರಿನ ಸರಬರಾಜು ಸ್ಥಗಿತಗೊಂಡಿದೆ’ ಎಂದು ಅಧಿಕಾರಿಗಳು ತಿಳಿಸಿದರು.

‘ಭೀಮಾ ನದಿಗೆ ನೀರು ಹರಿಸಲು ಮಹಾರಾಷ್ಟ್ರ ಸರ್ಕಾರ ಮನವಿ ಮಾಡಲಾಗುವುದು ಎಂದ ಅವರು. ಚಡಚಣ ಏತ ನೀರಾವರಿ ಯೋಜನೆ ಶೀಘ್ರ ಮುಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ನೀರಿನ ಅಭಾವ ಉಂಟಾದಲ್ಲಿ ತಾತ್ಕಾಲಿಕ ವ್ಯವಸ್ಥೆಗಳ ಮೂಲಕ ನೀರು ಸರಬರಾಜು ಮಾಡುವಂತೆ ಸೂಚಿಸಿದರು.

ಕಂದಾಯ ಇಲಾಖೆಯಿಂದ ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್ಟಾಪ್ ಕಿಟ್ಗಳನ್ನು ಶಾಸಕರು ವಿತರಿಸಿದರು. ತಾಲ್ಲೂಕು ನೋಡಲ್ ಅಧಿಕಾರಿ ಸಿ.ಬಿ. ಕುಂಬಾರ, ತಹಶೀಲ್ದಾರ್ ಸಂಜಯ ಇಂಗಳೆ, ಪ.ಪಂ ಮುಖ್ಯಾಧಿಕಾರಿ ಬಾಬಾಸಾಹೇಬ್ ತಾವಸೆ, ತಾ.ಪಂ ಇಒ ಅಶೋಕ ಕುಮಾರ ರಾಠೋಡ, ಗ್ರಾಮೀಣ ನೀರು ಸರಬರಾಜು ಎಇಇ ರಾಮಚಂದ್ರ ಬಂಡಿ, ಕೆಬಿಜೆಎನ್ಎಲ್ ಎಇಇ ಸಂಜೀವ ಹೀರೊಳ್ಳಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಾಹೇಬಗೌಡ ಜುಜ್ರವಾಡಿ, ಪಶು ವೈದ್ಯಕೀಯ ಸಹಾಯಕ ನಿರ್ದೇಶಕರಾದ ಮಲ್ಲಿಕಾರ್ಜುನ ಗಂಗನಳ್ಳಿ, ಹೆಸ್ಕಾಂ ಎಇಇ ವಿಜಯಕುಮಾರ ಹವಾಲ್ದಾರ, ಬಿಇಒ ಚಿದಾನಂದ ಕಟ್ಟಿಮನಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260402-26-131769493

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.