ಸಿಂದಗಿ: ನಗರದ ಸಾರಂಗಮಠ-ಗಚ್ಚಿನಮಠದ ಪೂಜ್ಯ ಚೆನ್ನವೀರ ಸ್ವಾಮೀಜಿ 35ನೆಯ ಪುಣ್ಯಸ್ಮರಣೋತ್ಸವ ಮೇ 22ರಂದು ಸಾರಂಗಮಠದ ಆವರಣದಲ್ಲಿ ನಡೆಯಲಿದೆ.

ಸ್ಮರಣೋತ್ಸವದ ಅಂಗವಾಗಿ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಚೆನ್ನವೀರ ಸ್ವಾಮೀಜಿ ಪ್ರತಿಷ್ಠಾನ, ಶ್ರೀಪದ್ಮರಾಜ ವಿದ್ಯಾವರ್ಧಕ ಸಂಸ್ಥೆ, ಲಿಂಗೈಕ್ಯ ಎನ್. ಚೆನ್ನಯ್ಯಸ್ವಾಮಿ, ಲಿಂಗೈಕ್ಯ ಶಾರದಾದೇವಿ ಜನಕಲ್ಯಾಣ ಫೌಂಡೇಷನ್ ಹಾಗೂ ವಿಜಯಪುರ ಅನುಗ್ರಹ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ಕಣ್ಣಿನ ಉಚಿತ ತಪಾಸಣೆ ಹಾಗೂ ಶಸ್ತ್ರಚಿಕಿತ್ಸಾ ಶಿಬಿರ ನಡೆಯಲಿದೆ.

ಸಂಜೆ 6.30ಕ್ಕೆ ಸಾರಂಗಮಠದ ಆವರಣದಲ್ಲಿನ ಲಿಂಗೈಕ್ಯ ಸಿದ್ಧಲಿಂಗಸ್ವಾಮೀಜಿ ಸಭಾಂಗಣದಲ್ಲಿ ಸ್ಮರಣೋತ್ಸವ ಸಮಾರಂಭ ನಡೆಯಲಿದೆ. ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆ ರಾಷ್ಟ್ರೀಯ ಅಧ್ಯಕ್ಷ ಪ್ರಭು ಸಾರಂಗದೇವ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಸಾರಂಗಮಠ-ಗಚ್ಚಿನಮಠದ ಉತ್ತರಾಧಿಕಾರಿ ವಿಶ್ವ ದೇವ ಶಿವಾಚಾರ್ಯ ಸ್ವಾಮೀಜಿ ಸಮ್ಮುಖ ವಹಿಸುವರು. ಮಾಡಬಾಳ ಸಮುದಾಯ ಆರೋಗ್ಯಾಧಿಕಾರಿ ಚಂದ್ರಕಾಂತ ಬಿರಾದಾರ ‘ಕಾಯಕಯೋಗಿ ಚೆನ್ನವೀರ ಸ್ವಾಮೀಜಿ’ ವಿಷಯ ಕುರಿತು ಉಪನ್ಯಾಸ ನೀಡುವರು.

ಸಮಾರಂಭದ ನಂತರ ಮಹಾಪ್ರಸಾದ ನಡೆಯಲಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-26-879198198

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.