ವಿಜಯಪುರ: ಇಲ್ಲಿನ ರಾಜಕುಮಾರ ಲೇಔಟ್ನಲ್ಲಿ ಮಂಗಳವಾರ ಸಂಜೆ ಆಟವಾಡುತ್ತಿದ್ದ ಮೂರು ವರ್ಷ ಬಾಲಕನ ಮೇಲೆ ಬೀದಿ ನಾಯಿ ದಾಳಿ ನಡೆಸಿ, ಬಾಲಕನನ್ನು 100 ಅಡಿ ದೂರದ ವರೆಗೆ ಎಳೆದೊಯ್ದಿರುವ ಘಟನೆ ನಡೆದಿದೆ.

ಮನೆ ಮುಂದೆ ಆಟವಾಡುತ್ತಿದ್ದ ಬಾಲಕ ವಿರಾಜ್ ಸಂತೋಷ ಬಿರಾದಾರ (3) ಮೇಲೆ ಬೀದಿ ನಾಯಿ ದಾಳಿ ಮಾಡಿದೆ. ಬಳಿಕ ಬಾಯಿಯಲ್ಲಿ ಕಚ್ಚಿಕೊಂಡು ಎಳೆದೊಯ್ದಿರುವ ಭಯಾನಕ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಸ್ಥಳಿಯರು ಕೂಡಲೇ ಬಾಲಕನ ರಕ್ಷಣೆ ಮಾಡಿದ್ದಾರೆ. ಬಾಲಕನ ಬೆನ್ನು, ತೊಡೆಗೆ ಗಾಯವಾಗಿದೆ. ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ವಿಜಯಪುರ ನಗರದಲ್ಲಿ ಬೀದಿನಾಯಿಗಳ ಕಾಟಕ್ಕೆ ಜನ ರೋಸಿ ಹೋಗಿದ್ದಾರೆ. ಬೀದಿ ನಾಯಿಗಳ ನಿಯಂತ್ರಣ ಮಾಡದ ಮಹಾನಗರ ಪಾಲಿಕೆ ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-26-2146428495

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.