ವಿಜಯಪುರ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸದೆ ಇರುವ ಹಾಗೂ ಗುಂಪುಗಳನ್ನು ರಚಿಸದೆ ಇರುವ ಚೀಟಿ ಕಂಪನಿಗಳನ್ನು ಕಪ್ಪುಪಟ್ಟಿಗೆ ಸೇರಿಸಲಾಗುವುದು ಎಂದು ಸಹಕಾರ ಸಂಘಗಳ ಉಪನಿಬಂಧಕರು ತಿಳಿಸಿದ್ದಾರೆ.

ಮುಂದಿನ ಏಳು ದಿನದಲ್ಲಿ ಸಂಬಂಧಪಟ್ಟ ಚೀಟಿ ಕಂಪನಿಯ ಪೋರ್ಮನ್ಗಳು ಆಕ್ಷೇಪಣೆಗಳಿದ್ದರೆ ನೇರವಾಗಿ ಸಹಕಾರ ಸಂಘಗಳ ಉಪನಿಬಂಧಕರ ಕಚೇರಿಗೆ ಸಂಪರ್ಕಿಸಬಹುದು.

ಒಂದು ವೇಳೆ ಯಾವುದೇ ಆಕ್ಷೇಪಣೆಗಳು ಇಲ್ಲದಿದ್ದರೆ ಗುಂಪುಗಳ ರಚಿಸದೆ ಇರುವಂತಹ ಕಂಪನಿಗಳ ಹೆಸರನ್ನು ಇಲಾಖೆಯಲ್ಲಿ ಕಪ್ಪು ಪಟ್ಟಿಗೆ ಸೇರಿಸಲಾಗುವುದು ಎಂದವರು ತಿಳಿಸಿದ್ದಾರೆ.

ವಿಜಯಪುರ ಜಿಲ್ಲೆಯಲ್ಲಿ ಒಟ್ಟು 38 ಚೀಟಿ ನಿಧಿಗಳ ಕಂಪನಿಗಳಿದ್ದು, ಅವುಗಳ ಪೈಕಿ ಕೇವಲ 18 ಚೀಟಿ ಕಂಪನಿಗಳು ಕಾರ್ಯನಿರತವಾಗಿರುತ್ತವೆ. 20 ಚೀಟಿ ಕಂಪನಿಗಳು ಕಾರ್ಯನಿರ್ವಹಿಸುತ್ತಿಲ್ಲ ಎಂದವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260324-26-1875838188

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.