ವಿಜಯಪುರ: ಕೇಂದ್ರ ಸರ್ಕಾರ ಜಾರಿಗೆ ತರುತ್ತಿರುವ ನಾಲ್ಕು ಕಾರ್ಮಿಕ ಕಾಯ್ದೆಗಳನ್ನು ವಿರೋಧಿಸಿ ಬುಧವಾರ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ (ಸಿಐಟಿಯು) ಪದಾಧಿಕಾರಿಗಳು ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಕರಾಳ ದಿನ ಆಚರಿಸಿದರು.

ಸಿಐಟಿಯು ಸಂಚಾಲಕ ಲಕ್ಷ್ಮಣ ಹಂದ್ರಾಳ ಮಾತನಾಡಿ, ‘ಏಪ್ರಿಲ್ 1ರಂದು ಕೇಂದ್ರ ಸರ್ಕಾರ ನಾಲ್ಕು ಕಾರ್ಮಿಕ ಸಂಹಿತೆಗಳ ಜಾರಿಗೆ ಮುಂದಾಗಿದೆ. ‘ವ್ಯವಹಾರ ಮಾಡಲು ಸುಲಭತೆ’ ಎಂಬ ಹೆಸರಿನಲ್ಲಿ ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೆ ತರಲಾಗುತ್ತಿದ್ದು, ತಕ್ಷಣ ಅವುಗಳನ್ನು ರದ್ದುಪಡಿಸಿ ಕಾರ್ಮಿಕ ಕಾಯ್ದೆಯನ್ನು ವಾಪಸ್ಸು ಪಡೆಯಬೇಕು’ ಎಂದು ಆಗ್ರಹಿಸಿದರು.

ಸಹ ಸಂಚಾಲಕ ಅಣ್ಣಾರಾಯ ಈಳಗೇರ ಮಾತನಾಡಿ, ‘ಕಾರ್ಮಿಕ ಸಂಘಟನೆಗಳೊಂದಿಗೆ ಯಾವುದೇ ಸಮಾಲೋಚನೆ ನಡೆಸದೆ ಸಂಹಿತೆಗಳು ರೂಪಗೊಂಡಿದ್ದು, ಇದು ಅಂತರರಾಷ್ಟ್ರೀಯ ಕಾರ್ಮಿಕ ಮಾನದಂಡಗಳ ಉಲ್ಲಂಘನೆಯಾಗಿದೆ. ಈ ಕಾಯ್ದೆಗಳು ಕಾರ್ಮಿಕರನ್ನು ಶೋಷಣಾತ್ಮಕ ಪರಿಸ್ಥಿತಿಗಳಿಗೆ ತಳ್ಳಲಿವೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸುರೇಶ ಜೀಬಿ ಮಾತನಾಡಿ, ‘ಸುಮಾರು 150 ವರ್ಷಗಳ ಹೋರಾಟದ ಫಲವಾಗಿ ಬ್ರಿಟಿಷ್ ಕಾಲದಲ್ಲಿ ಐದು ಕಾನೂನುಗಳು ಮತ್ತು ಸ್ವಾತಂತ್ರ್ಯಾನಂತರ ಸಂಸತ್ತಿನ ಮೂಲಕ ಒಟ್ಟು 44 ಕೇಂದ್ರ ಕಾನೂನುಗಳು ಹಾಗೂ ರಾಜ್ಯಮಟ್ಟದಲ್ಲಿ ಸುಮಾರು 150 ಕಾನೂನುಗಳು ರೂಪಗೊಂಡಿವೆ. ಆದರೆ, ಈಗಿನ ಕೇಂದ್ರ ಸರ್ಕಾರ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರಚಿಸಿ ಆ ಎಲ್ಲ ಕಾನೂನುಗಳನ್ನು ಹಿಂಪಡೆಯಲು ಪ್ರಯತ್ನಿಸುತ್ತಿದೆ’ ಎಂದು ಆರೋಪಿಸಿದರು.

ರೈತ ಸಂಘದ ಮುಖಂಡ ಭೀಮರಾಯ ಪೂಜಾರಿ ಬೆಂಬಲ ವ್ಯಕ್ತಪಡಿಸಿದರು. ಸುನಂದಾ ನಾಯಕ, ಸುಮಂಗಲಾ ಆನಂದಶೆಟ್ಟಿ ಮಾತನಾಡಿದರು. ನಾರಾಯಣ ಬಡಿಗೇರ, ಲಾಲಹ್ಮದ ಶೇಖ, ಚಂದ್ರಶೇಖರ ವಾಲಿಕಾರ, ಎಂ.ಎಸ್.ಕೊಂಡಗೂಳಿ, ಸುರೇಖಾ ವಾಗ್ಮೋರೆ, ಸುವರ್ಣ ಹಲಗಣಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260402-26-1677762327

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.