ವಿಜಯಪುರ: ‘ಹಿಂದೂಗಳು ಒಗ್ಗಟ್ಟಾಗಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಮಾಡಿದರಿಂದಲೇ ನಾನು ಎರಡು ಬಾರಿ ಶಾಸಕನಾಗಿ ಆಯ್ಕೆಯಾಗಿ ನಿರೀಕ್ಷೆ ಮೀರಿ ವಿಜಯಪುರ ನಗರವನ್ನು ಅಭಿವೃದ್ಧಿ ಮಾಡಲು ಸಾಧ್ಯವಾಗಿದೆ. ಹೀಗಾಗಿ ಮುಂಬರುವ ಚುನಾವಣೆ ದೃಷ್ಟಿಯಿಂದ ಪ್ರತಿಯೊಬ್ಬರ ಮನೆಯಲ್ಲಿಯೂ 18 ವರ್ಷ ಮೇಲ್ಪಟ್ಟವರನ್ನು ತಪ್ಪದೆ ಮತದಾರರ ಪಟ್ಟಿಯಲ್ಲಿ ಸೇರಿಸಬೇಕು’ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ವಿಜಯಪುರ ನಗರದಲ್ಲಿ ಭಾನುವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ನಗರದಲ್ಲಿ ರಸ್ತೆ, ಒಳಚರಂಡಿ ನಿರ್ಮಾಣದ ಜೊತೆಗೆ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿದ್ದರಿಂದ ಅತ್ಯುತ್ತಮ ಗಾಳಿ ಬೀಸುವ ನಗರಗಳ ಪಟ್ಟಿಯಲ್ಲಿ ದೇಶದಲ್ಲೇ ವಿಜಯಪುರ ನಗರ 4ನೇ ಸ್ಥಾನದಲ್ಲಿದ್ದು, ದೇಶದ ಗಮನಸೆಳೆದಿದೆ. ಎಲ್ಲ ಸಮುದಾಯಗಳ ಸಮುದಾಯ ಭವನಗಳ ನಿರ್ಮಾಣ, ದೇವಸ್ಥಾನಗಳ ಜೋರ್ಣೋದ್ಧಾರ, ಶಾಲಾ ಕೊಠಡಿಗಳನ್ನು ಸಹ ನಿರ್ಮಿಸಲಾಗಿದೆ. ನಗರದಲ್ಲಿ ಶಾಂತಿ ನೆಲೆಸುವಂತೆಯೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದರು.

ಭೂಮಿಪೂಜೆ ಬಳಿಕ ನೆರೆದ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದ ಶಾಸಕರು, ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವುದಾಗಿ ಭರವಸೆ ನೀಡಿದರು.

ಮಹಾನಗರ ಪಾಲಿಕೆ ಸದಸ್ಯರಾದ ಪ್ರೇಮಾನಂದ ಬಿರಾದಾರ, ಮಲ್ಲಿಕಾರ್ಜುನ (ಕುಮಾರ) ಗಡಗಿ, ಮುಖಂಡರಾದ ಎ.ಡಿ.ದೇಶಪಾಂಡೆ, ಸತೀಶ ಕುಲಕರ್ಣಿ, ಶಂಕರ ಭಟ್ ಅಗ್ನಿಹೋತ್ರಿ, ಲಕ್ಷ್ಮೀಕಾಂತ ಕುಲಕರ್ಣಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-26-1282123446

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.